ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನ್ಯಾ.ಗಂಗೂಲಿ ರಾಜಿನಾಮೆಗೆ ಪಟ್ಟು, ಸಂಸತ್ ಕಲಾಪ ಮುಂದೂಡಿಕೆ

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ..

Lingaraj Badiger
Updated On : 13 Dec 2013, 5:22 am

ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾ.ಎ.ಕೆ.ಗಂಗೂಲಿ ಅವರ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಶುಕ್ರವಾರ ಸಂಸತ್ತಿನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.

ನ್ಯಾ.ಎ.ಕೆ.ಗಂಗೂಲಿ ಅವರು ಈ ಕೂಡಲೇ ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಉಭಯ ಸದನಗಳಲ್ಲೂ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು.

ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು, ಗಂಗೂಲಿ ಅವರು ಈ ಕೂಡಲೇ ರಾಜಿನಾಮೆ ನೀಡಬೇಕು, ಇಲ್ಲದಿದ್ದರೆ ಕೇಂದ್ರ ಸರ್ಕಾರವೇ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಟಿಎಂಸಿ ಸಂಸದರು ಧ್ವನಿಗೂಡಿಸಿ, ಸರ್ಕಾರದ ವಿರುದ್ಧ ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದರು. ಈ ವೇಳೆ ತೀವ್ರ ಗದ್ದಲ ಉಂಟಾಗಿದ್ದರಿಂದ ಸ್ವೀಕರ್ ಮೀರಾ ಕುಮಾರ್ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಇನ್ನು ರಾಜ್ಯಸಭೆಯಲ್ಲು ನಾ.ಗಂಗೂಲಿ ರಾಜಿನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದರಿಂದ ಉಭಯ ಸದನಗಳ ಕಲಾವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement