ಬಿಜೆಪಿ ಭ್ರಷ್ಟಾಚಾರವನ್ನು ಜನ ಮರೆಯುವುದಿಲ್ಲ: ಸಿಎಂ
ಮೈಸೂರು: ಭಾರತೀಯ ಜನತಾ ಪಕ್ಷದ ಭ್ರಷ್ಟಾಚಾರವನ್ನು ಜನ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ನಾಯಕರು ಮಾಡಿದ ಭ್ರಷ್ಟಾಚಾರವನ್ನು ಜನರು ಮರೆಯುವುದಿಲ್ಲ ಎಂದಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾಷಣ ಮಾಡಿದ ಮಾತ್ರಕ್ಕೆ ಜನ ರಾಜ್ಯ ಬಿಜೆಪಿ ನಾಯಕರ ಭ್ರಷ್ಟತೆಯನ್ನು ಮರೆಯಲ್ಲ ಎಂದು ಅವರು ತಿಳಿಸಿದ್ದಾರೆ.
ಯಾರ ಅಧಿಕಾರವಧಿಯಲ್ಲಿ ಯಾವ ಸಚಿವರು ಜೈಲಿಗೆ ಹೋಗಿದ್ದಾರೆಂಬುದು ಎಲ್ಲರಿಗೂ ತಿಳಿದೇ ಇದೆ ಎಂದು ಅವರು ಹೇಳಿದ್ದಾರೆ.