ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದೆ: ಎಚ್ಡಿಕೆ
ಬೆಂಗಳೂರು: 2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.
ಇಂದು ದೇವನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ದವಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದ ಅವರು, ಯಾವುದೇ ರಾಷ್ಟ್ರೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಕೆಜಿಪಿ ಹೊಂದಾಣಿಕೆಯಿಂದ ಜಾತ್ಯಾತೀತ ಜನತಾದಳಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.