ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

2014ರಲ್ಲೂ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲ್ಲ: ಚಿದು

ದೆಹಲಿಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನೊಂದಿಗೆ ಹೊಸ ಪಕ್ಷ ಆಮ್ ಆದ್ಮಿ ನೂತನ ಶಕ್ತಿಯಾಗಿ ಹೊರ ಹೊಮ್ಮಿದರೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

Lingaraj Badiger
Updated On : 14 Dec 2013, 3:04 am

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನೊಂದಿಗೆ ಹೊಸ ಪಕ್ಷ ಆಮ್ ಆದ್ಮಿ ನೂತನ ಶಕ್ತಿಯಾಗಿ ಹೊರ ಹೊಮ್ಮಿದರೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಇಂತಹದ್ದೆ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಮುಂಬೈನಲ್ಲಿ ನ್ಯಾಷಿನಲ್ ಸ್ಟಾಕ್ ಎಕ್ಸ್ಚೆಂಜ್(ಎನ್ಎಸ್ಇ)ನ 20ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಚಿದು, 2014ರ ಸಾರ್ವತ್ರಿಕ ಚುನಾವಣೆಯ ನಂತರ ದೇಶದಲ್ಲಿ ಸ್ಥಿರ ಸರ್ಕಾರ ರಚನೆಯಾಗುತ್ತದೆ ಎಂದು ಖಚಿತವಾಗಿ ಹೇಳುವುದು ಕಷ್ಟ ಎಂದಿದ್ದಾರೆ.

2014ರಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಸಹ ಪ್ರಮುಖ ಪಾತ್ರ ವಹಿಸಲಿವೆ ಎಂದು ಚಿದಂಬರಂ ಹೇಳಿದ್ದಾರೆ.

ಈ ಮಧ್ಯೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ಇದೆ.ಆದರೆ ತೃತೀಯ ರಂಗ ಸಹ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಹೇಳಿದ್ದಾರೆ.

ಇನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು, ಎಲ್ಲ ಪ್ರಾದೇಶಗಳನ್ನೊಳಗೊಂಡ ತೃತೀಯ ರಂಗವೇ ಕೇಂದ್ರದಲ್ಲಿ ಮುಂದಿನ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement