ರಾಹುಲ್ ಪ್ರಧಾನಿ ಅಭ್ಯರ್ಥಿ, ಜ.17ಕ್ಕೆ ಘೋಷಣೆ?
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು 2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ...
ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು 2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದು ಜನವರಿ 17ರಂದು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ಜನವರಿ 17ರಂದು ನಡೆಯುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಲಿದೆ ಎಂದು ತಿಳಿದು ಬಂದಿದೆ.
ನಾಲ್ಕು ರಾಜ್ಯಗಳಲ್ಲಿ ಸೋಲು ಕಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಬಹಿರಂಗ ಪಡಿಸಲು ಮುಂದಾಗಿದೆ ಎನ್ನಲಾಗುತ್ತಿದೆ.
ದೆಹಲಿಯಲ್ಲಿ ನಡೆಯುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಲೋಕಸಭಾ ಚುನಾವಣೆಯ ಗೆಲುವಿಗೆ ಯೋಜನೆ ರೂಪಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಜನದನ್ ದ್ವಿವೇದಿ ತಿಳಿಸಿದ್ದಾರೆ.
ಈಗಾಗಲೇ ಭಾರತೀಯ ಜನತಾ ಪಕ್ಷ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಲ್ಕು ರಾಜ್ಯಗಳಲ್ಲು ಗೆಲುವು ಕಂಡಿದೆ. ಇದರಿಂದ ಮುಖಭಂಗ ಅನುಭವಿಸಿದ ಕಾಂಗ್ರೆಸ್ ರಾಹುಲ್ ಅವರನ್ನು ಜನವರಿ ತಿಂಗಳಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿದ್ದು, ಚುನಾವಣೆಗೆ ಪೂರ್ವಸಿದ್ಧತೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.