ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೂಗಲ್ ಸರ್ಚ್‌ನಲ್ಲಿ ಮೋದಿ ನಂ.1

ಗೂಗಲ್‌ನಲ್ಲಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟ 'ಭಾರತೀಯ ರಾಜಕಾರಣಿ' ಎಂಬ ಹೆಗ್ಗಳಿಕೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ...

Rashmi Kasaragodu
Updated On : 18 Dec 2013, 2:32 am

ನವದೆಹಲಿ: ಗೂಗಲ್‌ನಲ್ಲಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟ 'ಭಾರತೀಯ ರಾಜಕಾರಣಿ' ಎಂಬ ಹೆಗ್ಗಳಿಕೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಗೂಗಲ್ ಬಿಡುಗಡೆ ಮಾಡಿದ Zietgeist 2013ರ  ವರದಿಯಲ್ಲಿ 2013ರಲ್ಲಿ ನರೇಂದ್ರ ಮೋದಿ ಅವರ ಬಗ್ಗೆಯೇ ಹೆಚ್ಚು ಜನರು ಗೂಗಲ್‌ನಲ್ಲಿ ಸರ್ಚ್ ಮಾಡಿದ್ದಾರೆ ಎಂಬ ಅಂಶವನ್ನು ಹೇಳಲಾಗಿದೆ.

ರಾಜಕಾರಣಿಗಳ ವಿಭಾಗದಲ್ಲಿ ಮೋದಿ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಇದ್ದಾರೆ. ಆದಾಗ್ಯೂ, ಪ್ರಧಾನಿ ಮನಮೋಹನ್ ಸಿಂಗ್ ಮತ್ತು ತಮಿಳ್ನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಟಾಪ್ 5 ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ನಂ.6ರಲ್ಲಿ  ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇದ್ದು, ಇವರ ನಂತರದ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ಸುಷ್ಮಾ ಸ್ವರಾಜ್ ನಂತರದ ಸ್ಥಾನಗಳಲ್ಲಿದ್ದಾರೆ.

'ಸುದ್ದಿ' ವಿಭಾಗದಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂಬ ಸುದ್ದಿ ಹೆಚ್ಚು ಬಾರಿ ಶೋಧ ಮಾಡಲ್ಪಟ್ಟಿದೆ. ಈ ವಿಭಾಗದಲ್ಲಿ ಬ್ಲಾಕ್‌ಬರಿ ಮಾರಾಟ 2ನೇ ಸ್ಥಾನಗಳಿಸಿದ್ದು, ರಾಹುಲ್ ದ್ರಾವಿಡ್ ನಿವೃತ್ತಿ ಸುದ್ದಿ 3 ನೇ ಸ್ಥಾನಗಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement