ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಸತ್ತಿನಲ್ಲೂ ಪ್ರತಿಧ್ವನಿಸಿದ ಅಮೆರಿಕದ ಅಮಾನವೀಯ ವರ್ತನೆ

ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಬಂಧಿಸಿದ್ದಲ್ಲದೇ, ಅವರನ್ನು ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ ಅಮೆರಿಕದ ಅಮಾನವೀಯ ವರ್ತನೆ ಸಂಸತ್ತಿನಲ್ಲೂ ಪ್ರತಿಧ್ವನಿಸಿತು.

Lingaraj Badiger
Updated On : 18 Dec 2013, 1:06 am

ನವದೆಹಲಿ: ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಬಂಧಿಸಿದ್ದಲ್ಲದೇ, ಅವರನ್ನು ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ ಅಮೆರಿಕದ ಅಮಾನವೀಯ ವರ್ತನೆ ಬುಧವಾರ ಸಂಸತ್ತಿನಲ್ಲೂ ಪ್ರತಿಧ್ವನಿಸಿತು. ಅಲ್ಲದೆ ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು.

ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ, ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ದೇವಯಾನಿಯ ಬಂಧನ ಪ್ರಕರಣವನ್ನು ಭಾರತ ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ಇದನ್ನು ಲಘುವಾಗಿ ಪರಿಗಣಿಸಿದರೆ ಇಂತಹ ಪ್ರಕರಣಗಳು ಮತ್ತೆ ಮರುಕಳಿಸುತ್ತವೆ ಎಂದು ಹೇಳಿದರು.

ದೇವಯಾನಿ ಪ್ರಕರಣದಲ್ಲಿ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಬಿಎಸ್‌ಪಿ ನಾಯಕಿ ಮಾಯಾವತಿ ಅವರು, ಅಮೆರಿಕದ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು ಮತ್ತು ದೇವಯಾನಿ ದಲಿತ ಮಹಿಳೆಯೆಂದು ನಿರ್ಲಕ್ಷ್ಯ ಮಾಡದೇ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸಿಪಿಎಂ ನಾಯಕ ಸಿತಾರಾಂ ಯೆಚುರಿ ಅವರು ಅಮೆರಿಕದ ಅಧಿಕಾರಗಳ ದುಂಡಾವರ್ತನೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಕರಣ ಏನು?: ವೀಸಾ ವಂಚನೆ, ಮನೆಗೆಲಸದಾಕೆಗೆ ಕಡಿಮೆ ಸಂಬಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೇವಯಾನಿ ಅವರನ್ನು 5 ದಿನಗಳ ಹಿಂದೆ ನ್ಯೂಯಾರ್ಕ್ ಪೊಲೀಸರು ಸಾರ್ವಜನಿಕವಾಗಿ ಬಂಧಿಸಿದ್ದರು. ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ್ದ ಪೊಲೀಸರು ಬಳಿಕ ಮಾದಕ ವಸ್ತು ವ್ಯಸನಿಗಳ ಸೆಲ್‌ನಲ್ಲಿ ಕೂಡಿ ಹಾಕಿದ್ದರು. ಪೊಲೀಸರ ಈ ಕ್ರಮಕ್ಕೆ ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಮೆರಿಕದ ರಾಯಭಾರಿ ನ್ಯಾನ್ಸಿ ಪೊವೆಲ್‌ರನ್ನು ಕರೆಸುವ ಮೂಲಕ ಪ್ರತಿಭಟನೆ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement