ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಂದ್ರ ಸಚಿವೆ ಸ್ಥಾನಕ್ಕೆ ಜಯಂತಿ ನಟರಾಜನ್ ರಾಜಿನಾಮೆ

ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವೆ ಜಯಂತಿ ನಟರಾಜನ್ ಅವರು ತಮ್ಮ..

Lingaraj Badiger
Updated On : 21 Dec 2013, 1:30 am

ನವದೆಹಲಿ: ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ರಾಜ್ಯ ಸಚಿವೆ ಜಯಂತಿ ನಟರಾಜನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಟರಾಜನ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.

ನಟರಾಜನ್ ಅವರ ರಾಜಿನಾಮೆಯಿಂದ ತೆರವಾದ ಖಾತೆಯನ್ನು ಪೆಟ್ರೋಲಿಯಂ ಸಚಿವ ಎಂ. ವೀರ್ಪಪ ಮೊಯ್ಲಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಇತ್ತೀಚಿಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ 2014ರ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸಮರ್ಥ ತಂಡ ರಚನೆಗೆ ಮುಂದಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಜಯಂತಿ ನಟರಾಜನ್ ಅವರಿಂದ ರಾಜಿನಾಮೆ ಕೊಡಿಸಿ, ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯಂತಿ ನಟರಾಜನ್ ಅವರು ಪಕ್ಷದಲ್ಲಿ ಉನ್ನತ ಹುದ್ದೆಯನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಹಲವು ಕೇಂದ್ರ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement