ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೇಶದ ಸಮಸ್ಯೆ ನೀಗಬೇಕಾದರೆ ದೇಶ ಕಾಂಗ್ರೆಸ್ ಮುಕ್ತವಾಗಬೇಕು: ಮೋದಿ

ದೇಶದ ಸಮಸ್ಯೆಗಳು ನೀಗಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ....

Rashmi Kasaragodu
Updated On : 22 Dec 2013, 4:31 am

ಮುಂಬೈ: ದೇಶದ ಸಮಸ್ಯೆಗಳು ನೀಗಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ.

ಬ್ರಿಟಿಷರನ್ನು ದೇಶದಿಂದ ಹೊಡೆದೋಡಿಸಲು ಮುಂಬೈಯಿಂದ ಕ್ವಿಟ್ ಇಂಡಿಯಾ ಚಳುವಳಿಯನ್ನು ಮಾಡಲಾಯಿತು. ಇದೀಗ ನಾವು ಕಾಂಗ್ರೆಸ್ ಆಡಳಿತ ಮುಕ್ತಗೊಳಿಸಲು ಹೋರಾಟ ಮಾಡಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ.
 
ಕಾಂಗ್ರೆಸ್ ನೇತೃತ್ವದ ಸರ್ಕಾರವೇ ನಮ್ಮೆಲ್ಲರ ಸಮಸ್ಯೆಗಳಿಗೆ ಕಾರಣ. ನಮ್ಮೆಲ್ಲರ ಸಮಸ್ಯೆಗಳು ಪರಿಹಾರವಾಗಬೇಕಾದರೆ ನಾವು ದೇಶದಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರವನ್ನು ಗದ್ದುಗೆಗೇರಿಸಬೇಕೆಂದು ಅವರು ಹೇಳಿದ್ದಾರೆ.
 
ಏತನ್ಮಧ್ಯೆ, ನಮ್ಮ ದೇಶವನ್ನು ಮತ ಬ್ಯಾಂಕ್ ರಾಜಕೀಯದಿಂದ ಮುಕ್ತಗೊಳಿಸದೇ ಇದ್ದರೆ, ನಮ್ಮ ದೇಶದ ಸಮಸ್ಯೆ ಪರಿಹಾರವಾಗಲಾರದು ಎಂದು ಮೋದಿ ನುಡಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement