ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಗ್ನಿ-3 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯಬಲ್ಲ ಅಗ್ನಿ-3 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಸೋಮವಾರ ಯಶಸ್ವಿಯಾಗಿ ನಡೆದಿದೆ.

Srinivasa Murthy VN
Updated On : 23 Dec 2013, 7:09 am

ಬಾಲಸೋರ್: ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯಬಲ್ಲ ಅಗ್ನಿ-3 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಸೋಮವಾರ ಯಶಸ್ವಿಯಾಗಿ ನಡೆದಿದೆ.

ಒಡಿಶಾದ ಬಾಲಸೋರ್‌ನಲ್ಲಿ ನಡೆಸಿದ ಈ ಪರೀಕ್ಷಾರ್ಥ ಉಡಾವಣೆಯಲ್ಲಿ ಅಗ್ನಿ-3 ಕ್ಷಿಪಣಿಯು ನಿಗದಿತ ಗುರಿಯನ್ನು ನಿಖರ ಸಮಯಾವಕಾಶದೊಳಗೆ ತಲುಪಿ, ವಿಜ್ಞಾನಿಗಳ ಸಂತಸಕ್ಕೆ ಕಾರಣವಾಗಿದೆ. ಸುಮಾರು 3000 ಸಾವಿರ ಕಿಮೀ ಕ್ರಮಿಸಬಲ್ಲ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ದಿ ಪಡಿಸಿದೆ.

17 ಮೀಟರ್ ಎತ್ತರವಿರುವ ಈ ಕ್ಷಿಪಣಿಯು ಸುಮಾರು 50 ಟನ್ ತೂಕವಿದೆ. ಅಲ್ಲದೆ ಸುಮಾರು 1.5 ಟನ್ ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಕ್ಷಿಪಣಿ ಹೊಂದಿದೆ ಎಂದು ಡಿಆರ್‌ಡಿಒ ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್‌ನಲ್ಲಿ ಇಂದು ಸಂಜೆ 5 ಗಂಟೆ 55 ನಿಮಿಷದಲ್ಲಿ ಮೊಬೈಲ್ ಲಾಂಚರ್‌ಗಳ ಮೂಲಕ ಅಗ್ನಿ-3 ಕ್ಷಿಪಣಿಯನ್ನು ಉಡಾವಣೆಗೊಳಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement