ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೇಲೆಕೇರಿ ಅದಿರು ನಾಪತ್ತೆ: ಶಾಸಕ ಹೆಬ್ಬಾರ್ ಪುತ್ರ ವಿವೇಕ ಬಂಧನ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ..

Lingaraj Badiger
Updated On : 23 Dec 2013, 4:56 am

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಅವರನ್ನು ಸಿಬಿಐ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ಡ್ರೀಮ್ ಲಾಜಿಸ್ಟಿಕ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿವೇಕ ಹೆಬ್ಬಾರ್ ಅವರನ್ನು ಇಂದು ಮಧ್ಯಾಹ್ನ ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್‌ಗೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ವಿವೇಕ ಹೆಬ್ಬಾರ್ ಅವರು ಡ್ರೀಮ್ ಲಾಜಿಸ್ಟಿಕ್ಸ್ ಮೂಲಕ ಸುಮಾರು 8 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಬೇಲೆಕೇರಿ ಬಂದರಿನಿಂದ ಕಳ್ಳಸಾಗಣೆ ಮಾಡಲಾಗಿದೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಈ ಮುಂಚೆ ವಿವೇಕ ಹೆಬ್ಬಾರ್ ಅವರಿಗೆ ನೋಟಿಸ್ ನೀಡಿ ಸಿಬಿಐ ಕಚೇರಿಗೆ ಕರೆಯಿಸಿಕೊಂಡು ವಿಚಾರಣೆಗೆ ಒಳಪಡಿಸಿದ್ದರು. ವಿವೇಕ್ ಹೆಬ್ಬಾರ್ ನಿರ್ದೇಶಕರಾಗುವ ಮುನ್ನಾ ಡ್ರೀಮ್ ಲಾಜಿಸ್ಟಿಕ್ಸ್‌ಗೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ನಿರ್ದೇಶಕರಾಗಿದ್ದರು. ಬೇಲೆಕೇರಿ ಅದಿರು ನಾಪತ್ತೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸೆ. 15 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಡ್ರೀಮ್ ಲಾಜಿಸ್ಟಿಕ್ ಕಚೇರಿ ಮೇಲೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement