ಕೇಜ್ರಿವಾಲ್ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ
ದೆಹಲಿ ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ನೂತನ ಸಂಪುಟದ ಸಂಭಾವ್ಯ ಸಚಿವರ ಬಗ್ಗೆ..
ನವದೆಹಲಿ: ದೆಹಲಿ ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ನೂತನ ಸಂಪುಟದ ಸಂಭಾವ್ಯ ಸಚಿವರ ಬಗ್ಗೆ ಮಂಗಳವಾರ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಸರ್ಕಾರ ರಚನೆಗೆ ಸಿದ್ಧವಾಗಿರುವ ಆಮ್ ಆದ್ಮಿ ಪಕ್ಷ(ಎಎಪಿ)ದ, ಮನೀಶ್ ಸಿಸೋಡಿಯಾ, ರಾಖಿ ಬಿರ್ಲಾ, ಸೋಮನಾಥ್ ಭಾರತಿ, ಸತ್ಯೇಂದ್ರ ಜೈನ್, ಸೌರಭ್ ಭಾರದ್ವಾಜ್ ಹಾಗೂ ಗಿರೀಶ್ ಸೋನಿ ಅವರು ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ ನಡೆದ ಪಕ್ಷದ ಸಭೆಯಲ್ಲಿ ಈ ಆರು ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಮುಂಚೆ, ಸಚಿವರ ಪಟ್ಟಿಯನ್ನು ಬುಧವಾರ ಅಧಿಕೃತವಾಗಿ ಘೋಷಿಸುವುದಾಗಿ ಎಎಪಿ ತಿಳಿಸಿತ್ತು.
ಜನಲೋಕಪಾಲ ಮಸೂದೆಗಾಗಿ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ನಿರಶನ ಆರಂಭಿಸಿದ ರಾಮಲೀಲಾ ಮೈದಾನದಲ್ಲೇ ಅರವಿಂದ್ ಕೇಜ್ರಿವಾಲ್ ಅವರು ಡಿಸೆಂಬರ್ 26ಕ್ಕೆ ದೆಹಲಿಯ 7ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.