ರಾಹುಲ್ ಗಾಂಧಿಯೇ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಮೊಯ್ಲಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಇಂಧನ, ಪರಿಸರ ಮತ್ತು ಅರಣ್ಯ..
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಇಂಧನ, ಪರಿಸರ ಮತ್ತು ಅರಣ್ಯ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಹೆಚ್ಚುವರಿಯಾಗಿ ಪರಿಸರ ಮತ್ತು ಅರಣ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೊಯ್ಲಿ, ರಾಹುಲ್ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದರು. ಅಲ್ಲದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಂಯತಿ ನಟರಾಜನ್ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಹೇಳಿ, ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಇದೇ ವೇಳೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಮೋದಿ ಅವರು ಕೇವಲ ಮಾತನಾಡುತ್ತಾರೆ ಹೊರತು ಕೆಲಸ ಮಾಡುವುದಿಲ್ಲ. ಆದರೆ ತಾವು ಮಾತನಾಡದೇ ಹೆಚ್ಚು ಕೆಲಸ ಮಾಡುವುದಾಗಿ ತಿಳಿಸಿದರು.