ಟೆಸ್ಟ್ ಕ್ರಿಕೆಟ್ಗೆ ಕಾಲಿಸ್ ವಿದಾಯ
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಲ್ರೌಂಡರ್ ಜಾಕ್ ಕಾಲಿಸ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಕೇಪ್ಟೌನ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಲ್ರೌಂಡರ್ ಜಾಕ್ ಕಾಲಿಸ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
35 ವರ್ಷದ ದಕ್ಷಿಣ ಆಫ್ರಿಕಾದ ಆಲ್ ರೌಂಡರ್ ಭಾರತದ ವಿರುದ್ಧ ಡರ್ಬನ್ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ನಂತರ ವಿದಾಯ ಹೇಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ಗೆ ಮಾಹಿತಿ ನೀಡಿರುವ ಕಾಲಿಸ್, ಏಕದಿನ ಕ್ರಿಕೆಟ್ ಮತ್ತು ಟಿ-20 ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
1995ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಕಾಲಿಸ್, ಈ ವರೆಗೂ 166 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ 13ಸಾವಿರದ 174 ಸಾವಿರ ರನ್ಗಳನ್ನು ಪೇರಿಸಿದ್ದಾರೆ. ಆ ಪೈಕಿ 44 ಶತಕ ಮತ್ತು 58 ಅರ್ಧ ಶತಕಗಳು ಸೇರಿವೆ. ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಮೊನಚಿನ ಬೌಲಿಂಗ್ ಮೂಲಕವೂ ದಕ್ಷಿಣ ಆಫ್ರಿಕಾ ತಂಡಕ್ಕೆ ಬೆನ್ನೆಲುಬಾಗಿದ್ದ ಕಾಲಿಸ್ 300 ವಿಕೆಟ್ಗಳನ್ನು ಕಬಳಿಸಿದ್ದಾರೆ.
ತಮ್ಮ ಆಲ್ರೌಂಡ್ ಆಟದಿಂದ ಸತತ 18 ವರ್ಷಗಳ ಕಾಲ ದಕ್ಷಿಣ ಆಫ್ರಿಕಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದ ಕಾಲಿಸ್, ಇದೀಗ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.