ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಂದ್ರದ ನಿರ್ಧಾರ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಅರುಣ್ ಜೇಟ್ಲಿ

ಗೂಢಚಾರ ಪ್ರಕರಣದ ತನಿಖೆಗೆ ಆಯೋಗ ರಚನೆಗೆ ಮುಂದಾಗಿರುವ ಕೇಂದ್ರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

Srinivasa Murthy VN
Updated On : 26 Dec 2013, 5:45 am

ನವದೆಹಲಿ: ಗುಜರಾತ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಗೂಢಚಾರ ಪ್ರಕರಣದ ತನಿಖೆಗೆ ಆಯೋಗ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಹೇಳಿದ್ದಾರೆ.

ಗೂಢಚಾರ ಪ್ರಕರಣದ ತನಿಖೆಗಾಗಿ ಆಯೋಗ ರಚಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ ಬೆನ್ನಲ್ಲೇ ಅರುಣ್ ಜೇಟ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಗೂಢಚಾರ ಪ್ರಕರಣವು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿದ್ದು, ಈ ಬಗ್ಗೆ ಗುಜರಾತ್ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದೆ. ಹೀಗಿರುವಾಗ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಮೂಗು ತೂರಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ನಿರ್ಧಾರ ಒಕ್ಕೂಟ ರಚನಾ ವ್ಯವಸ್ಥೆಗೆ ಮಾರಕವಾಗಿದ್ದು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ವಿರೋಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

'ಕೇಂದ್ರ ಸರ್ಕಾರದ ನಿರ್ಧಾರ ಶಂಕಾಸ್ಪದವಾಗಿದ್ದು, ನಾವು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಸಂವಿಧಾನದ ಪ್ರಕಾರ ಇದು ಒಕ್ಕೂಟ ರಚನಾ ವ್ಯವಸ್ಥೆಯ ವಿರುದ್ಧವಾದುದು. ನರೇಂದ್ರ ಮೋದಿ ಅವರನ್ನು ನೇರವಾಗಿ ಎದುರಿಸಲಾಗದ ಕಾಂಗ್ರೆಸ್ ಸರ್ಕಾರ, ಹಿಂಬಾಗಿಲ ರಾಜಕಾರಣಕ್ಕೆ ಮುಂದಾಗಿದೆ. ತನಿಖಾ ಏಜೆನ್ಸಿಗಳ ಮುಖಾಂತರ ಮೋದಿ ಅವರನ್ನು ಮಣಿಸಲು ಅದು ಷಢ್ಯಂತ್ರ ರೂಪಿಸುತ್ತಿದೆ ಎಂದು ಜೇಟ್ಲಿ ಆರೋಪಿಸಿದ್ದಾರೆ.

2009ರಲ್ಲಿ ಬೆಂಗಳೂರಿನಲ್ಲಿದ್ದ ಗುಜರಾತ್ ಮೂಲದ ಯುವತಿಯೊಬ್ಬಳ ಕುರಿತು ಗೂಢಚಾರ ನಡೆಸುವಂತೆ ಗುಜರಾತ್ ಸರ್ಕಾರದ ಅಂದಿನ ಸಚಿವ ಅಮಿತ್ ಷಾ ಅವರು ಗುಜರಾತ್ ಪೊಲೀಸ್ ವರಿಷ್ಠರಿಗೆ ಸೂಚಿಸಿದ್ದರು. ಅದರನ್ವಯ ಪೊಲೀಸರು ಯುವತಿಯ ಬೆನ್ನು ಬಿದ್ದು ಆಕೆಯ ಕ್ಷಣ ಕ್ಷಣದ ಮಾಹಿತಿಗಳನ್ನು ಅಮಿತ್ ಶಾ ಅವರಿಗೆ ನೀಡುತ್ತಿದ್ದರು. ಈ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿದ ಕೋಬ್ರಾಪೋಸ್ಟ್ ವೆಬ್ ತಾಣ ಈ ಬಗ್ಗೆ ದಾಖಲೆ ಸಂಗ್ರಹಿಸಿ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement