ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಎನ್‌ಜಿ ದರ ಏರಿಕೆ ಪ್ರಶ್ನಿಸಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುತ್ತಿರುವ ಸಂದರ್ಭದಲ್ಲೇ ಸಿಎನ್‌ಜಿ ದರ ಏರಿಕೆ ಮಾಡಿರುವ..

Lingaraj Badiger
Updated On : 27 Dec 2013, 2:03 am

ನವದೆಹಲಿ: ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುತ್ತಿರುವ ಸಂದರ್ಭದಲ್ಲೇ ಸಿಎನ್‌ಜಿ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ. ಅಲ್ಲದೆ ರಾಷ್ಟ್ರರಾಜಧಾನಿಯಲ್ಲಿ ಆಟೋ ರಿಕ್ಷಾ ದರವನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಆಟೋ ರಿಕ್ಷಾ ದರವನ್ನು ಪರಿಶೀಲಿಸಲಾಗುವುದು ಮತ್ತು ಮತ್ತೆ ಸಿಎನ್‌ಜಿ ದರ ಏರಿಕೆ ಮಾಡಲು ಏನು ಕಾರಣ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಕೇಂದ್ರ ಸರ್ಕಾರ ಎರಡು ಬಾರಿ ಸಿಎನ್‌ಜಿ ಬೆಲೆಯನ್ನು ಏರಿಕೆ ಮಾಡಿದೆ.

ಹೊಸ ಸರ್ಕಾರ ರಚನೆಯಾಗುತ್ತಿರುವ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುವ ಅಗತ್ಯ ಏನಿತ್ತು? ಇದರಿಂದ ಕೇಂದ್ರ ಸರ್ಕಾರ ಉದ್ದೇಶ ಸ್ಪಷ್ಟವಾಗಿ ಅರ್ಥವಾಗುತ್ತದೆ ಎಂದಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ ನಂತರ, ದರ ಏರಿಕೆ ನಿರ್ಧಾರವನ್ನು ವಾಪಸ್ ಪಡೆಯುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ನಿನ್ನೆಯಷ್ಟೆ ಕೇಂದ್ರ ಸರ್ಕಾರ ಸಿಎನ್‌ಜಿ ಬೆಲೆಯನ್ನು ಪ್ರತಿ ಕೆ.ಜಿಗೆ 4.50ರುಪಾಯಿ ಏರಿಕೆ ಮಾಡಿತ್ತು. ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬಂದಿದ್ದು, ಸದ್ಯ ದೆಹಲಿಯಲ್ಲಿ ಪ್ರತಿ ಕೆ.ಜಿ.ಸಿಎನ್‌ಜಿ ಬೆಲೆ 50.10ರುಪಾಯಿ ಇದೆ.

ಮತ್ತೆ ಸಿಎನ್‌ಜಿ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಆಟೋ ರಿಕ್ಷಾ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದರ ಏರಿಕೆ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಾಳೆ ನಾನು ಅಧಿಕಾರ ಸ್ವೀಕರಿಸಿದ ನಂತರ ಆಟೋ ಚಾಲಕರೊಂದಿಗೆ ಚರ್ಚಿಸಿ, ಸಮಸ್ಯೆ ಪರಿಹಾರಕ್ಕೆ ಯತ್ನಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement