ದೆಹಲಿ 7ನೇ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರರಾಜಧಾನಿ ದೆಹಲಿಯ 7ನೇ ಮುಖ್ಯಮಂತ್ರಿಯಾಗಿ..
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರರಾಜಧಾನಿ ದೆಹಲಿಯ 7ನೇ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿ ಉಪ ರಾಜ್ಯಪಾಲ ನಜೀಬ್ ಜಂಗ್ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಅರವಿಂದ್ ಕೇಜ್ರಿವಾಲ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಕೇಜ್ರಿವಾಲ್ ಅವರೊಂದಿಗೆ ಸೋಮನಾಥ್ ಭಾರತಿ, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ರಾಖಿ ಬಿರ್ಲಾ, ಗಿರೀಶ್ ಸೋನಿ ಹಾಗೂ ಸೌರಭ್ ಭಾರದ್ವಾಜ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಚಿವರಿಗೆ ಖಾತೆ ಹಂಚಿಕೆ
ಅರವಿಂದ್ ಕೇಜ್ರಿವಾಲ್- ಗೃಹ, ಹಣಕಾಸು, ಇಂಧನ ಖಾತೆ
ಮನೀಶ್ ಸಿಸೋಡಿಯಾ- ಲೋಕೋಪಯೋಗಿ, ಶಿಕ್ಷಣ ಹಾಗೂ ನಗರಾಭಿವೃದ್ಧಿ ಖಾತೆ
ಸೋಮನಾಥ್ ಭಾರ್ತಿ- ಕಾನೂನು ಹಾಗೂ ಪ್ರವಾಸೋದ್ಯಮ
ಸೌರಭ್ ಭಾರದ್ವಾಜ್ - ಸಾರಿಗೆ ಖಾತೆ
ರಾಖಿ ಬಿರ್ಲಾ- ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಸತ್ಯೇಂದ್ರ ಜೈನ್ - ಆರೋಗ್ಯ