ಮಂಡ್ಯದ ಸಾತನೂರು ಬಳಿ ಬಸ್ ಪಲ್ಟಿ: 6 ಸಾವು
ಮಂಡ್ಯ ಜಿಲ್ಲೆಯ ಸಾತನೂರು ಬಳಿ ಖಾಸಗಿ ಬಸ್ವೊಂದು ಶನಿವಾರ ಪಲ್ಟಿಯಾಗಿದ್ದು, ಘಟನೆಯಲ್ಲಿ..
ಮಂಡ್ಯ: ಮಂಡ್ಯ ಜಿಲ್ಲೆಯ ಸಾತನೂರು ಬಳಿ ಖಾಸಗಿ ಬಸ್ವೊಂದು ಶನಿವಾರ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಸುಮಾರು 50ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದ್ಯಾಪಸಂದ್ರದಿಂದ ಮಂಡ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಇಂದು ಮಧ್ಯಾಹ್ನ ಸಾತನೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಅವಘಡ ಸಂಭವಿಸಿದೆ.
ದುರಂತದಲ್ಲಿ ಆರು ಪ್ರಯಾಣಿಕರು ಮೃತಪಟ್ಟಿದ್ದು, 50ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.