ರಾಹುಲ್ ಮುಂದೆ ಕೇಜ್ರಿವಾಲ್, ಮೋದಿ ಏನೂ ಅಲ್ಲ: ಲಾಲು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹೋಲಿಸಿದರೆ ದೆಹಲಿ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ..
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹೋಲಿಸಿದರೆ ದೆಹಲಿ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮೂರು ಬಾರಿ ಗುಜರಾತ್ನ ಮುಖ್ಯಮಂತ್ರಿಯಾಗಿರುವ ನರೇಂದ್ರ ಮೋದಿ ಅವರು ಏನೂ ಅಲ್ಲ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.
ದೆಹಲಿಯ ಜನ ಅರವಿಂದ್ ಕೇಜ್ರಿವಾಲ್ಗೆ ಮತ ನೀಡಿ ದೊಡ್ಡ ತಪ್ಪು ಮಾಡಿದ್ದಾರೆ. ಆದರೆ ಒಂದೇ ಒಂದು ತಿಂಗಳಲ್ಲೇ ಅವರಿಗೆ ತಮ್ಮ ತಪ್ಪಿನ ಅರಿವಾಗಲಿದೆ ಮತ್ತು ಕೇಜ್ರಿವಾಲ್ ಅವರು ದೆಹಲಿಯ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂಬ ದಾಖಲೆ ಬರೆಯಲಿದ್ದಾರೆ ಎಂದು ಲಾಲು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಲಾಲು, ಭಾರತೀಯ ಜನತಾ ಪಕ್ಷ ಈ ದೇಶದ ವೈರಿ ಎಂದರು.
ಲಾಲು ಹೇಳಿಕೆಗೆ ತಕ್ಷಣ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಕುಮಾರ್ ವಿಶ್ವಾಸ್ ಅವರು, ಲಾಲು ಅವರು ಎಎಪಿಯ ರಾಜಕೀಯ ಮೌಲ್ಯಕ್ಕೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ.