ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲಾರಿ-ಟಂಟಂ ಮುಖಾಮುಖಿ ಡಿಕ್ಕಿ: 8 ಸಾವು

ಬಿಜಾಪುರದ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಬಳಿ ಲಾರಿ ಹಾಗೂ ಟಂಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ...

ಸಾಂದರ್ಭಿಕ ಚಿತ್ರ
Vishwanath S
Updated On : 29 Dec 2013, 1:26 am

ಬಿಜಾಪುರ: ಬಿಜಾಪುರದ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಬಳಿ ಲಾರಿ ಹಾಗೂ ಟಂಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿರುವ ಧಾರುಣ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಇಂದು ಬೆಳಗ್ಗೆ 9.45ರ ಸುಮಾರಿನಲ್ಲಿ ಸಿಂದಗಿ ತಾಲ್ಲೂಕಿನ ದೇವರಹಿಪ್ಪರಗಿ ರಾಷ್ಟ್ರೀಯ ಹೆದ್ದಾರಿ 218ರ ಬಳಿ ಅತಿ ವೇಗದಿಂದ ಬರುತ್ತಿದ್ದ ಲಾರಿ, ಎದುರಿಗೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟಂಟಂನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿಯ ಪೈಕಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದಂತೆ 4 ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸಿಂದಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರಲ್ಲಿ ಐವರ ಗುರುತು ಪತ್ತೆಯಾಗಿದ್ದು, ಅವರನ್ನು ಕೇಮೂ ರಾಠೋಡ್, ನಬಿತಾಜ್, ಖಾಜಾಬಿ, ರಕ್ಷಿತ, ಮತ್ತು ಪೊಲೀಸ್‌ಪೇದೆ ಬಸವರಾಜು ಎಂದು ಗುರುತಿಸಲಾಗಿದೆ.

ಟಂಟಂ ಸಿಂದಗಿಯಿಂದ ದೇವರಹಿಪ್ಪರಿಗೆಗೆ ಪ್ರಯಾಣಿಕರನ್ನು ಕರೆದೊಯ್ಯುವಾಗ ಬಿಜಾಪುರದ ಎಪಿಎಂಸಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಮುಂದಿದ್ದ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಮುಂದೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಂಟಂ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಭೀರಕ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ತೊಡಕ್ಕಾಗಿತ್ತು. ಸ್ಥಳಕ್ಕಾಗಮಿಸಿದ ಸಿಂದಗಿ ಪೊಲೀಸರು ಸಂಚಾರ ಸುಗಮಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement