ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಷ್ಯಾದಲ್ಲಿ ಮತ್ತೊಂದು ಸ್ಫೋಟ, 10 ಸಾವು

ರಷ್ಯಾದಲ್ಲಿ ವೋಲ್ಗೋಗ್ರಾಡ್‌ನಲ್ಲಿ ಮತ್ತೊಂದು ಆತ್ಮಾಹುತಿ ದಾಳಿ ನಡೆದಿದ್ದು, ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದಾರೆ...

Vishwanath S
Updated On : 30 Dec 2013, 1:59 am

ಮಾಸ್ಕೋ: ರಷ್ಯಾದಲ್ಲಿ ವೋಲ್ಗೋಗ್ರಾಡ್‌ನಲ್ಲಿ ಮತ್ತೊಂದು ಆತ್ಮಾಹುತಿ ದಾಳಿ ನಡೆದಿದ್ದು, ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದಾರೆ.

ರಷ್ಯಾದ ವೋಲ್ಗೋಗ್ರಾಡ್ನ ನಗರದ ಸಂಚಾರಿ ಬಸ್‌ನಲ್ಲಿ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ನಗರದ ಸಂಚಾರಿ ಬಸ್‌ನಲ್ಲಿ ನಡೆದ ಬಾಂಬ್ ಸ್ಫೋಟ ನೋಡಿದರೆ, ನಿನ್ನೆ ನಡೆದ ಆತ್ಮಾಹುತಿ ದಾಳಿಯಂತೆ ಇದೆ. ಇದು ಸಹ ಉಗ್ರರ ಕೃತ್ಯವಾಗಿದೆ ಎಂದು ರಷ್ಯಾದ ರಾಷ್ಟ್ರೀಯ ತನಿಖಾ ದಳ ಸ್ಪಷ್ಟಪಡಿಸಿದೆ.

ಉಗ್ರರು ಹೆಚ್ಚು ಜನದಟ್ಟನೆ ಇರುವ ಪ್ರದೇಶಗಳನ್ನೇ ಗುರಿಯಾಗಿಟ್ಟುಕೊಂಡು ದಾಳಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದಿದ್ದಾರೆ.  

ರಷ್ಯಾದ ವೋಲ್ಗೋಗ್ರಾಡ್ನ ರೇಲ್ವೆ ನಿಲ್ದಾಣದಲ್ಲಿ ನಿನ್ನೆಯಷ್ಟೇ ಮಹಿಳೆಯೊಬ್ಬಳು ನಡೆಸಿದ ಆತ್ಮಾಹುತಿ ದಾಳಿಗೆ 18 ಮಂದಿ ಬಲಿಯಾಗಿದ್ದರು. ಸುಮಾರು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ನಗರದ ರೇಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದ ಸಮಯದಲ್ಲಿ ಮೆಟಲ್ ಡಿಟೆಕ್ಟರ್ ಹತ್ತಿರ ಬರುತ್ತಿದ್ದಂತೆಯೇ ಮಹಿಳೆ ಸ್ಫೋಟಿಸಿಕೊಂಡಿದ್ದಳು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement