ಸಚಿವರಾಗಿ ಬೇಗ್, ಡಿಕೆಶಿ ಪ್ರಮಾಣ ಸ್ವೀಕಾರ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಸಚಿವರಾಗಿ ರೋಶನ್ ಬೇಗ್ ಮತ್ತು ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಂಪುಟ ಸಚಿವರಾಗಿ ರೋಶನ್ ಬೇಗ್ ಮತ್ತು ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ ಸಂಜೆ 5.30ಕ್ಕೆ ರಾಜಭವನದಲ್ಲಿ ನಡೆದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪ್ರಮಾಣ ವಚನ ಬೋಧಿಸಿದರು.
ಸಂಪುಟ ದರ್ಜೆ ಸಚಿವರಾಗಿ ರೋಶನ್ ಬೇಗ್ ಮತ್ತು ಡಿಕೆಶಿ ಅವರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಳಂಕದ ಕಾರಣ ನೀಡಿ ಸಂಪುಟದಿಂದ ಹೊರಗಿಟ್ಟಿದ್ದ ಹಿರಿಯ ಮುಖಂಡರಾದ ಡಿ.ಕೆ.ಶಿವಕುಮಾರ್ ಹಾಗು ರೋಶನ್ ಬೇಗ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ಮಂತ್ರಿಮಂಡಲ ಸೇರಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಸ್ಪೀಕರ್ ಕಾಗೋಡು ತಿಮ್ಮಪ್ಪ, ಪರಮೇಶ್ವರ್, ಕೃಷ್ಣ್ಣ ಬೈರೇಗೌಡ ಮೊದಲಾದವರು ಉಪಸ್ಥಿತರಿದ್ದರು.