ಡೀಸೆಲ್ ಬೆಲೆ ಏರಿಕೆ: ಯುಪಿಎ ವಿರುದ್ಧ ನಿತೀಶ್ ಕಿಡಿ
ಪಾಟ್ನಾ: ಡೀಸೆಲ್ ಬೆಲೆ ಏರಿಕೆ ಮಾಡಿರುವ ಯುಪಿಎ ಸರ್ಕಾರದ ವಿರುದ್ಧ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಕಿಡಿಕಾರಿದ್ದಾರೆ.
ಬೆಲೆ ಏರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಿತೀಶ್, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬೆಲೆ ಏರಿಕೆ ಮಾಡುವುದನ್ನಾ ತುಂಬಾ ಇಷ್ಟಪಡುವಂತಿದೆ. ಆದ್ದರಿಂದ ದಿನದಿಂದ ದಿನಕ್ಕೆ ಬೆಲೆ ಏರಿಕೆ ಮಾಡುತ್ತಿದೆ ಹೊರತು, ಕಡಿಮೆ ಮಾಡುವತ್ತಾ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.