ಪಕ್ಷವಿರೋಧಿ ಚಟುವಟಿಕೆ: 5 ಎಂಎಲ್ಸಿಗಳಿಗೆ ನೋಟಿಸ್
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಐದು ವಿಧಾನ ಪರಿಷತ್ ಸದಸ್ಯರ ವಿರುದ್ಧ ದೂರು ಬಂದಿದ್ದು, ಅವರೆಲ್ಲರಿಗೂ ನೋಟಿಸ್ ನೀಡಲಾಗುವುದು...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಐದು ವಿಧಾನ ಪರಿಷತ್ ಸದಸ್ಯರ ವಿರುದ್ಧ ದೂರು ಬಂದಿದ್ದು, ಅವರೆಲ್ಲರಿಗೂ ನೋಟಿಸ್ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಶನಿವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರಿನಲ್ಲಿರುವ ಎಲ್ಲ ಎಂಎಂಲ್ಸಿಗಳಿಗೆ ನೋಟಿಸ್ ನೀಡಲಾಗುವುದು. ಬಳಿಕ ವಿಚಾರಣೆ ನಡೆಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಮೋಹನ್ ಲಿಂಬಿಕಾಯಿ, ಭಾರತಿ ಶೆಟ್ಟಿ, ಮುಮ್ತಾಜ್ ಅಲಿಖಾನ್, ಬಿ.ಜೆ ಪುಟ್ಟಸ್ವಾಮಿ ಹಾಗೂ ಶಿವರಾಜ್ ಸಜ್ಜನ್ ಅವರನ್ನು ಅನರ್ಹಗೊಳಿಸಬೇಕು ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಶ್ರೀಶ ಅವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದೂರು ನೀಡಿದ್ದರು.