ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ಕಾರದಿಂದ ಮರು ಪರಿಶೀಲನಾ ಅರ್ಜಿ ಸಲ್ಲಿಕೆ
ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಫೆಬ್ರುವರಿ 3ರೊಳಗೆ ಮೀಸಲು...
ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಫೆಬ್ರುವರಿ 3ರೊಳಗೆ ಮೀಸಲು ನಿಗದಿಪಡಿಸಿ, ಶೀಘ್ರ ಚುನಾವಣೆ ನಡೆಸಬೇಕು ಎಂಬ ತೀರ್ಪಿನ ಬಗ್ಗೆ ಮರು ಪರಿಶೀಲನೆ ನಡೆಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಫೆಬ್ರುವರಿ 8ರಂದು ರಾಜ್ಯದ 2013-14ನೇ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಸರ್ಕಾರದ ಎಲ್ಲಾ ಅಧಿಕಾರಿಗಳು ಇದರ ಸಿದ್ಧತೆಯಲ್ಲಿದ್ದಾರೆ. ಬಜೆಟ್ ಪೂರ್ವ ಸಮಾಲೋಚನೆಗಳಲ್ಲಿ ಅವರು ತೊಡಗಿಕೊಂಡಿರುವುದರಿಂದ ಈ ಹಂತದಲ್ಲಿ ಮೀಸಲು ನಿಗದಿಪಡಿಸಿ ಚುನಾವಣೆ ನಡೆಸುವುದು ಅಸಾಧ್ಯ. ಆದ್ದರಿಂದ ಸಮಯಾವಕಾಶ ವಿಸ್ತರಿಸಬೇಕು ಎಂದು ಸರ್ಕಾರ ಕೋರಿದೆ.
ಬಜೆಟ್ ಕಾರಣದಿಂದ ಮೀಸಲಾತಿ ಪಟ್ಟಿ ಸಲ್ಲಿಸಲು ಫೆಬ್ರುವರಿ 15ರವರೆಗೆ ಕಾಲಾವಕಾಶ ನೀಡಬೇಕು ಎಂದು ಎಂದು ಸರ್ಕಾರ ಅರ್ಜಿಯಲ್ಲಿ ಕೇಳಿಕೊಂಡಿದೆ. ಈ ಅರ್ಜಿ ಸೋಮವಾರ ಸುಪ್ರೀಂನಲ್ಲಿ ವಿಚಾರಣೆಗೆ ಬರಲಿದೆ.