ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪೀಕರ್ ಬೋಪಯ್ಯ ಬಿಎಸ್‌ವೈ ಪರ: ಬೇಳೂರು

ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಕೆಲಸ...

Lingaraj Badiger
Updated On : 2 Feb 2013, 12:24 pm

ಮಂಗಳೂರು: ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 13 ಶಾಸಕರನ್ನು ಅನರ್ಹಗೊಳಿಸುವಂತೆ ನಾನು ಸ್ಪೀಕರ್‌ಗೆ ದೂರು ನೀಡಿದ್ದೆ, ಆದರೆ ಅವರು ಅನರ್ಹಗೊಳಿಸಿಲ್ಲ. ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ತಿಳಿಸಿದರು.

ಕೆಜೆಪಿಯ ಒತ್ತಡಕ್ಕೆ ಮಣಿದು ಶಾಸಕರು ರಾಜಿನಾಮೆ ನೀಡಿದ್ದಾರೆ. ಅವರ ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ. ಇದರಿಂದ ಬೋಪಯ್ಯ ಬಿಎಸ್‌ವೈ ಪಕ್ಷವೆಂದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬೇಳೂರು ದೂರಿದ್ದಾರೆ.

ಇನ್ನು ಬೇಳೂರು ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಂಸದ ಡಿ.ಬಿ.ಚಂದ್ರೇಗೌಡ ಅವರು, ವಿಧಾನಸಭೆ ಸದಸ್ಯರು ಸ್ಪೀಕರ್ ಅವರಿಗೆ ಗೌರವ ಕೊಡಬೇಕು, ಸದಸ್ಯರೇ ಗೌರವ ಕೊಡದಿದ್ದರೆ ಮತ್ಯಾರು ಗೌರವ ಕೊಡುತ್ತಾರೆ ಎಂದು ಪ್ರಶ್ನಿಸಿದರು, ಅಲ್ಲದೆ ಈ ಬಗ್ಗೆ ಬೇಳೂರು ಅವರಿಗೆ ನೋಟಿಸ್ ನೀಡಿ, ಸದನದಲ್ಲಿ ವಿಚಾರಣೆ ನಡೆಸಬಹುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement