ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅತ್ಯಾಚಾರ ತಡೆ ಸುಗ್ರೀವಾಜ್ಞೆಗೆ ಅಂಕಿತ

ಅತ್ಯಾಚಾರ ತಡೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ.

Srinivasa Murthy VN
Updated On : 3 Feb 2013, 5:17 am

ನವದೆಹಲಿ: ಅತ್ಯಾಚಾರ ತಡೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಹಿಳಾ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಅತ್ಯಾಚಾರ ತಡೆ ಸುಗ್ರೀವಾಜ್ಞೆಗೆ ಇಂದು ಅಂಕಿತ ಹಾಕಿದ್ದಾರೆ. ಪ್ರಣಬ್ ಅವರ ನಡವಳಿಕೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿರುವ ಮಹಿಳಾ ಸಂಘಟನೆಗಳು ರಾಷ್ಟ್ರಪತಿ ಭವನದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿವೆ.

"ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರದಂತಹ ಘೋರ ಕೃತ್ಯಗಳಿಗೆ ಸುಗ್ರೀವಾಜ್ಞೆ ಮೂಲಕ ತಡೆಹಾಕಲು ಸಾಧ್ಯವಿಲ್ಲ. ಬದಲಿಗೆ ಕಾನೂನು ಮತ್ತು ಸಂವಿಧಾನದ ಕಾಯ್ದೆಗಳಿಗೆ ತಿದ್ದುಪಡಿ ತಂದು ಇಂತಹ ಹೀನಕೃತ್ಯಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಇದನ್ನು ಬಿಟ್ಟು ಕೇವಲ ಸುಗ್ರೀವಾಜ್ಞೆ ಮೂಲಕ ಅತ್ಯಾಚಾರ ತಡೆಯಲು ಸಾಧ್ಯವಿಲ್ಲ. ಸುಗ್ರೀವಾಜ್ಞೆಗೆ ಅಂಕಿತ ಹಾಕುವ ಮೂಲಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದಿದ್ದಾರೆ ಎಂದು ಮಹಿಳಾ ಸಂಘಟನೆಗಳು ಆರೋಪಿಸಿವೆ.

ಅಲ್ಲದೆ ಈ ಕೂಡಲೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement