ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು: ಸೋಮವಾರ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ನಾಳೆ 9.30 ಕ್ಕೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿವೇಶನ ಕುರಿತಾದ ಕಾರ್ಯತಂತ್ರಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಈ ಮಾಹಿತಿಯನ್ನು ಪಕ್ಷದ ಅಧಿಕೃತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.