ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಳೆ ತುರ್ತು ಸಂಪುಟ ಸಭೆ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲಿಯೇ ರಾಜ್ಯ ಸರ್ಕಾರ ನಾಳೆ ತುರ್ತು ಸುಂಪುಟ ಸಭೆಯನ್ನು ಕರೆದಿದೆ.
ಸ್ಥಳೀಯ ಸಂಸ್ಥೆಗಳು ಚುನಾವಣೆಯನ್ನು ಶೀಘ್ರವಾಗಿ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಕುರಿತು ಚರ್ಚಿಸಲು ನಾಳೆ ತುರ್ತು ಸಂಪುಟ ಸಭೆ ಕರೆದಿದೆ. ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಾನಾ ಕಾರಣ ನೀಡಿ ಪದೇ ಪದೇ ಮುಂದೂಡುತ್ತಿರುವ ರಾಜ್ಯ ಸರ್ಕಾರದ ನಡವಳಿಕೆಯನ್ನು ಸುಪ್ರೀಂ ಕೋಟ್ ಈ ಹಿಂದೆ ನಡೆದ ವಿಚಾರಣೆಯಲ್ಲಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ನೆಪ ಹೇಳದೆ ಚುನಾವಣೆ ನಡೆಸಿ ಎಂದು ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿತ್ತು.