ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ವಿಶ್ವರೂಪಂ' ವಿವಾದಕ್ಕೆ ತೆರೆ

Parashurama
Updated On : 4 Feb 2013, 6:33 am

ಚೆನೈ: ಕಮಲಹಾಸ್ ಅಭಿನಯದ ವಿಶ್ವರೂಪಂ ಚಿತ್ರದ ವಿವಾದ ತೆರೆಕಂಡಿದೆ. ಇನ್ನು ಚಿತ್ರ ತಮಿಳುನಾಡಿನಲ್ಲಿ ತೆರೆಕಾಣಬೇಕಿದೆ. ಚಿತ್ರದ ವಿವಾದ ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಾಗೂ ಕಮಲ್ ಹಾಸನ್ ಅವರು ಹೈಕೋರ್ಟ್ಗೆ ಸಲ್ಲಿಸಿದ ರಿಟ್ ಅರ್ಜಿಯನ್ನು ಸೋಮವಾರ ಹಿಂಪಡೆದಿದ್ದಾರೆ.

ನ್ಯಾ. ಎಸ್.ರಾಜೇಶ್ವರನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಾಗಿದ್ದು, ತಾವು ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ಕಮಲ್ ಹಾಗೂ ತಮಿಳುನಾಡು ಸರ್ಕಾರ ಪರ ವಕೀಲರು ತಿಳಿಸಿದ್ದಾರೆ.

ಮುಸ್ಲಿಂ ಬಾಂಧವರೊಂದಿಗೆ ನಿನ್ನೆ ನಡೆದ ಸಭೆಯಲ್ಲಿ ಚಿತ್ರದಲ್ಲಿ ವಿವಾದಾತ್ಮಕ 7ನಿಮಿಷದ ದಶ್ಯವನ್ನು ತೆಗೆದುಹಾಕಬೇಕು ಎಂದು ಮುಸ್ಲಿಂ ಸಂಘಟೆಗಳು ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಕಮಲ್ ಒಪ್ಪಿಗೆ ಸೂಚಿಸಿದ್ದರಿಂದ ಚಿತ್ರ ಬಿಡುಗಡೆಗೆ ಹೇರಿದ್ದ ನಿಷೇಧವನ್ನು ಸರ್ಕಾರ ಹಿಂಪಡೆದಿದೆ.

ರು. 98 ಕೋಟಿ ವೆಚ್ಚದ ಭಾರಿ ಬಜೆಟ್ನ ವಿಶ್ವರೂಪಂ ಚಿತ್ರದಲ್ಲಿ ಮುಸ್ಲಿಂ ಬಾಂಧವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಲವು ಮುಸ್ಲಿಂ ಸಂಘಟನೆಗಳು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದವು.

ಮುಸ್ಲಿಂ ಸಂಘಟೆಗಳ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿತ್ತು, ಇದನ್ನು ಪ್ರಶ್ನಿಸಿ ಕಮಲ್ ಹಾಸನ್ ಅವರು ಮದ್ರಾಸ್ ಹೈಕೋರ್ಟ್ಗೆ ರೀಟ್ ಅರ್ಜಿ ಸಲ್ಲಿಸಿದ್ದರು. ಚಿತ್ರ ಬಿಡುಗಡೆಗೆ ಮುಸ್ಲಿಂ ಬಾಂಧವರಿಂದ ಹಾಗೂ ತಮಿಳುನಾಡು ಸರ್ಕಾರದಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಮನನೊಂದು ಚಿತ್ರ ಬಿಡುಗಡೆಗೊಳಿಸದಿದ್ದರೆ ಭಾರತವನ್ನು ಬಿಟ್ಟು ಹೊಗುತ್ತೆನೆಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments