ಹೇಮಶ್ರೀ ಕೊಲೆ ಪ್ರಕರಣ: ಸುರೇಂದ್ರ ಬಾಬುಗೆ ಜಾಮೀನು ಇಲ್ಲ
ಬೆಂಗಳೂರು: ನಟಿ ಹೇಮಶ್ರೀ ಕೋಲೆ ಪ್ರಕರಣದಲ್ಲಿ ಆರೋಪಿ ಸುರೇಂದ್ರ ಬಾಬು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 9ನೇ ತ್ವರಿತಗತಿಯ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ಪ್ರಕರಣದಲ್ಲಿ ಜಾಮೀನಿಗಾಗಿ ಆರೋಪಿ ಸಲ್ಲಿಸಿದ ಅರ್ಜಿಯನ್ನು ಇಂದು ಬೆಂಗಳೂರಿನ 9ನೇ ತ್ವರಿಗತಿಯ ನ್ಯಾಯಾಲಯ ಕೈಗೆತ್ತಿಕೊಂಡು, ಆರೋಪಿ ಸುರೇಂದ್ರ ಬಾಬು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಹೇಮಶ್ರೀ ಪತಿಯಾಗಿರುವ ಸುರೇಂದ್ರ ಬಾಬು, 2012ರಲ್ಲಿ ಹೇಮಶ್ರೀಯನ್ನು ಕಾರಿನಲ್ಲಿ ಹೈದರಾಬಾದ್ಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಬಲವಂತವಾಗಿ ತೋಟದ ಮನೆಯಲ್ಲಿ ಆಕೆ ಮೇಲೆ ಕ್ಲೋರೋ ಫಾರಂ ಪ್ರಯೋಗಿಸಿ ಆತ್ಯಾಚಾರವೆಸಗಲು ಪ್ರಯತ್ನಿಸಿದ್ದ.
ಕ್ಲೋರೋಫಾರಂ ಪ್ರಮಾಣ ಹೆಚ್ಚಾದ ಕಾರಣ ಹೇಮಶ್ರೀ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದರು. ಹೇಮಶ್ರೀಗೆ ಕ್ಲೋರೋಫಾರಂ ನೀಡಿದ್ದು ತಾನೇ ಎಂದು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಸುರೇಂದ್ರ ಬಾಬು ಅವರನ್ನು ಬಂಧಿಸಿದ್ದರು.
ಸದ್ಯ ಸುರೇಂದ್ರ ಬಾಬು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜೈಲಿನಿಂದ ಹೊರ ಬರಲು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.