ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ: ಇ.ಕೃಷ್ಣಪ್ಪ ಆರೋಪ
ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು: ನನ್ನ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಇಂದು ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಅವರು, ನನ್ನನು ಮುಗಿಸಲು ಹುನ್ನಾರ ನಡೆಸಲಾಗಿದೆ. ನನ್ನ ಕೊಲೆಗೆ 25 ಲಕ್ಷ ರುಪಾಯಿ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದರು. ಈ ಬಗ್ಗೆ ತಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಈ ಸಂಬಂಧ 18 ಜನರನ್ನು ಬಂಧಿಸಿದ್ದಾರೆ. ಆದರೆ ಆರೋಪಿಗಳು ಜೈಲಿನಿಂದಲೇ ನನ್ನ ಕೊಲೆಗೆ ಸ್ಕೆಚ್ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ತಮ್ಮ ಕೊಲೆಗೆ ಸಂಚು ನಡೆಸುತ್ತಿರುವವರ ಬಗ್ಗೆ ಮಾಹಿತಿ ನೀಡಿ ಎಂದು ಕೃಷ್ಣಪ್ಪ ಸರ್ಕಾರವನ್ನು ಆಗ್ರಹಿಸಿದರು.
ಕೃಷ್ಣಪ್ಪ ಅವರ ಆರೋಪಕ್ಕೆ ಉತ್ತರಿಸಿದ ಡಿಸಿಎಂ ಆರ್. ಅಶೋಕ್ ಅವರು ಈ ಬಗ್ಗೆ ತಾವು ಪೊಲೀಸರಿಂದ ಮಾಹಿತಿ ಪಡೆಯುತಿದ್ದು, ನಾಳೆ ಚರ್ಚೆ ಮಾಡಲಾಗುವುದು ಎಂದು ಉತ್ತರಿಸಿದರು.
ಈ ಹಿಂದೆಯೂ ಪರಿಷತ್ ಸದಸ್ಯ ಕೃಷ್ಣಪ್ಪ ಅವರು ತಮ್ಮ "ಕೊಲೆ ಸಂಚು' ಕುರಿತು ಮಾದ್ಯಮಗಳಲ್ಲಿ ಹೇಳಿಕೆ ನೀಡಿದ್ದರು.