ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಥಳೀಯ ಸಂಸ್ಥೆಗಳ ಚುನಾವಣೆ: ಸ್ಪೀಕರ್-ಚಿಕ್ಕಮಠ್ ಮಾತುಕತೆ ವಿಫಲ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಮತ್ತು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಚಿಕ್ಕಮಠ್ ಅವರ ನಡುವಿನ ಮಾತುಕತೆ ವಿಫಲವಾಗಿದೆ.

Srinivasa Murthy VN
Updated On : 6 Feb 2013, 5:20 am

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಮತ್ತು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಚಿಕ್ಕಮಠ್ ಅವರ ನಡುವಿನ ಮಾತುಕತೆ ವಿಫಲಗೊಂಡಿದೆ.

ನಿನ್ನೆ ವಿಧಾನಸೌಧದಲ್ಲಿ ನಡೆದ ಕಲಾಪದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವ ಖಾಸಗಿ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತ್ತು.

ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಸ್ಪೀಕರ್ ಬೋಪ್ಪಯ್ಯ ಮತ್ತು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಚಿಕ್ಕಮಠ್ ಅವರ ಚರ್ಚೆ ನಡೆಸಿದರು. ಆದರೆ ಈ ಮಾತುಕತೆ ವಿಫಲಗೊಂಡಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಮಠ್ ಅವರು, ತಾವು ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಶೀಘ್ರದಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡುವುದಾಗಿ ಹೇಳಿದರು. ಕೇಂದ್ರ ಆಯೋಗದಿಂದ ಮಾಹಿತಿ ಬರುತ್ತಿದ್ದಂತೆ ತಾವು ಚುನಾವಣಾ ದಿನಾಂಕವನ್ನು ಪ್ರಕಟಿಸುವುದಾಗಿ ಚಿಕ್ಕಮಠ್ ತಿಳಿಸಿದರು.

ಅಲ್ಲದೆ ತಾವು ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಚುನಾವಣೆ ಖಚಿತ ಎಂದು ಚಿಕ್ಕಮಠ್ ಹೇಳಿದರು.

ನಿನ್ನೆ ಅಧಿವೇಶನದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2 ತಿಂಗಳುಗಳ ಕಾಲ ಮುಂದೂಡುವ ಶಾಸಕ ಗೂಳಿಹಟ್ಟಿ ಶೇಖರ್ ಅವರ ಖಾಸಗಿ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು. ಆದರೆ ಇಂದು ಸ್ಪೀಕರ್ ಮತ್ತು ಆಯುಕ್ತರ ನಡುವೆ ನಡೆದ ಮಾತುಕತೆ ವಿಫಲವಾದ್ದರಿಂದ ಶೀಘ್ರದಲ್ಲಿಯೇ ಚುನಾವಣೆ ದಿನಾಂಕ ಪ್ರಕಟವಾಗುವ ಲಕ್ಷಣಗಳು ಗೋಚರಿಸುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement