ಖುಷ್ಬು ನಿವಾಸದ ಮೇಲೆ ಸ್ಟಾಲಿನ್ ಬೆಂಬಲಿಗರಿಂದ ದಾಳಿ
ಚೆನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಮೂರನೆ ಪುತ್ರ ಸ್ಟಾಲಿನ್ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಡಿಎಂಕೆ ಸದಸ್ಯೆ ಹಾಗೂ ಚಿತ್ರ ನಟಿ ಖುಷ್ಬು ಅವರ ಚೆನೈ ನಿವಾಸದ ಮೇಲೆ ಗುರುವಾರ ಅವರ ಬೆಂಬಲಿಗರು ದಾಳಿ ನಡೆಸಿದ್ದಾರೆ.
ನಿನ್ನೆ ಖಷ್ಬು ತಮಿಳು ನಿಯತಕಾಲಿಕೆ ನೀಡಿದ ಸಂದರ್ಶನದಲ್ಲಿ ಸ್ಟಾಲಿನ್ ಅವರು ಡಿಎಂಕೆ ಪಕ್ಷದ ಮುಂದಿನ ಅಧ್ಯಕ್ಷನಾಗುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಈ ಬಗ್ಗೆ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು. ಇದರಿಂದ ಕುಪಿತಗೊಂಡ ಅವರ ಅಭಿಮಾನಿಗಳು ಇಂದು ಚೆನೈನಲ್ಲಿರುವ ಖುಷ್ಬು ನಿವಾಸದ ಮೇಲೆ ದಾಳಿ ನಡೆಸಿ, ಕಿಟಕಿ, ಗಾಜುಗಳಿಗೆ ಹಾನಿ ಮಾಡಿದ್ದಾರೆ.
ಡಿಎಂಕೆ ಪಕ್ಷದ ಉತ್ತರಾಧಿಕಾರಿಯ ಸಂಬಂಧ ಕರುಣಾನಿಧಿ ಕುಟುಂಬದಲ್ಲೇ ಒಡಕುಂಟಾಗಿರುವ ಸಂದರ್ಭದಲ್ಲೇ ಖುಷ್ಬು ಹೇಳಿಕೆ ಡಿಎಂಕೆ ಪಕ್ಷದಲ್ಲಿ ತಲೆನೋವಾಗಿ ಪರಿಣಮಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.