ತೊಗಾಡಿಯಾ ವಿರುದ್ಧ ಕ್ರಮ ಕೈಗೊಳ್ಳಿ: 'ಮಹಾ' ಸರ್ಕಾರಕ್ಕೆ ಕೇಂದ್ರ ಸೂಚನೆ
ವಿಶ್ವ ಹಿಂದು ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ನವದೆಹಲಿ: ಪ್ರಚೋದನಾಕಾರಿ ಭಾಷಣ ಮಾಡಿ ಟೀಕೆಗೆ ಗುರಿಯಾಗಿರುವ ವಿಶ್ವ ಹಿಂದು ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಕಾನೂನನ್ನು ಉಲ್ಲಂಘಿಸಿದ್ದೇ ಆದರೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.
ಪ್ರವೀಣ್ ತೊಗಾಡಿಯಾ ಅವರು ಒಂದು ಸಮುದಾಯದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಸಾಕ್ಷಿಗಳು ದೃಢಪಟ್ಟರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿಂಧೆ ಸೂಚನೆ ಹಿನ್ನೆಲೆಯಲ್ಲಿ ಚವ್ಹಾಣ್ ತೊಗಾಡಿಯಾ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.
ಈ ಮಧ್ಯೆ ಪ್ರಚೋದನಾಕಾರಿ ಭಾಷಣ ಮಾಡಿದ ತೊಗಾಡಿಯಾ ವಿರುದ್ಧ ಮಹಾರಾಷ್ಟ್ರ ಸರ್ಕಾರ ಅಗತ್ಯ ಕ್ರಮ ಜರುಗಿಸಬೇಕೆಂದು ಕೇಂದ್ರ ರಾಜ್ಯ ಗೃಹ ಮಂತ್ರಿ ಆರ್.ಪಿ.ಎನ್.ಸಿಂಗ್ ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.