ಮೋದಿ ನನ್ನ ಸ್ನೇಹಿತ: ಮೋಹನ್ ಭಾಗವತ್
ಅಲಹಾಬಾದ್: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನನ್ನ ಸ್ನೇಹಿತ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
ಅಲಹಾಬಾದ್ನಲ್ಲಿ ವಿಶ್ವ ಹಿಂದು ಪರಿಷತ್ (ವಿಎಚ್ಪಿ), ಸಂಘ ಪರಿವಾರದ ಆಯೋಜಿಸಿದ್ದ ಧರ್ಮ ಸಂಸದ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ, ನರೇಂದ್ರ ಮೋದಿ ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿಯೇ, ನೀವು ಅವರನ್ನು ಬೆಂಬಲಿಸುತ್ತಿರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಾಗವತ್, ಮೋದಿ ನನ್ನ ಸೇಹಿತ. ಮೇಲಾಗಿ ಈ ವಿಷಯದ ಬಗ್ಗೆ ಮಾತನಾಡಲು ತಾವು ರಾಜಕೀಯ ಅಭ್ಯರ್ಥಿ ಅಲ್ಲ ಹಾಗೂ ತಾವು ಆಗಮಿಸಿರುವುದು ರಾಜಕೀಯ ಭೇಟಿಗಾಗಿ ಅಲ್ಲ ಎಂದು ಹೇಳಿದರು.
ಬಿಜೆಪಿಯ ಕೇಲವು ನಾಯಕರು ನರೇಂದ್ರ ಮೋದಿ ಅವರೇ ಪಕ್ಷದ ಮುಂದಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಎಚ್ಪಿಯ ನಾಯಕ ಅಶೋಕ್ ಸಿಂಘಾಲ್, ಮಾಜಿ ಪ್ರಧಾನಿ ಜವಹಾರಲಾಲ್ ನೆಹರು ನಂತರ ಮೋದಿ ಅತಿ ಹೆಚ್ಚು ಜನಪ್ರಿಯತೆ ಹೊಂದಿದ್ದು, ಮೋದಿ ಪ್ರಧಾನಿ ಅಭ್ಯರ್ಥಿಯಾಗಲು ವಿಎಚ್ಪಿ ಬೆಂಬಲಿಸಲಿದೆ ಎಂದು ಹೇಳಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.