ವಿವಿಐಪಿ ಭದ್ರತಾ ಪಡೆಯನ್ನೆ ಮಹಿಳೆಯರ ರಕ್ಷಣೆಗೆಕೆ ಬಳಸಿಕೊಳ್ಳಬಾರದು? ಸುಪ್ರೀಂ ಪ್ರಶ್ನೆ
ನವದೆಹಲಿ: ವಿಐಪಿಗಳಿಗೆ ನೀಡುವ ಭದ್ರತಾ ಪಡೆಯನ್ನೇ ದೆಹಲಿ ಮಹಾನಗರದಲ್ಲಿ ಮಹಿಳೆಯರಿಗೆ ರಕ್ಷಣೆಗೆ ಏಕೆ ಬಳಸಿಕೊಳ್ಳಬಾರದೆಂದು ಗುರುವಾರ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಹರೀಶ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ದೆಹಲಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಭದ್ರತೆ ನೀಡಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಪೊಲೀಸರಿಗೆ ಪ್ರಶ್ನಿಸಿತು. ಈ ವೇಳೆ ನಗರದಲ್ಲಿ ಗಣ್ಯ, ಅತಿ ಗಣ್ಯ ವ್ಯಕ್ತಿಗಳ ಭದ್ರತೆಗಾಗಿ ಹಾಗೂ ರಸ್ತೆ ಸಂಚಾರಕ್ಕಾಗಿ ಹೆಚ್ಚಿನ ಭದ್ರತಾ ಸಿಬ್ಬಂದಿಗಳ ಬಳಕೆಯಾಗುತ್ತಿರುವುದರಿಂದ, ನಗರದಲ್ಲಿ ಮಹಿಳೆಯರ ರಕ್ಷಣೆಗೆ ಹೆಚ್ಚಿನ ಭದ್ರೆತೆ ನೀಡಲು ಕಷ್ಟವಾಗುತ್ತಿದೆ ಎಂದು ದೆಹಲಿ ಪೊಲೀಸರು ತಮ್ಮ ಅಳಲನ್ನು ತೊಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ವಿವಿಐಪಿ ಭದ್ರತಾ ಪಡೆಯನ್ನೇ ಮಹಿಳೆಯರ ರಕ್ಷಣೆಗೆ ಏಕೆ ಬಳಸಿಕೊಳ್ಳಬಾರದು ಎಂದು ಪ್ರಶ್ನಿಸಿದರು.
ಪೊಲೀಸರ ಅಳಲನ್ನು ಆಲಿಸಿದ ಸುಪ್ರೀಂ ಕೋರ್ಟ್, ನಗರದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದ್ದು, ಆದಷ್ಟು ಬೇಗ ಖಾಲಿ ಇರುವ ಸಿಬ್ಬಂದಿಯನ್ನು ಭರ್ತಿಮಾಡುವಂತೆ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರಿಗೆ ಸೂಚನೆ ನೀಡಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.