ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾವೇರಿ: ಸುಪ್ರೀಂನಲ್ಲಿ ಮೇಲ್ಮನವಿಗೆ ನಿರ್ಧಾರ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Srinivasa Murthy VN
Updated On : 8 Feb 2013, 7:41 am

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ವಿಧಾನಸೌಧದಲ್ಲಿ ನಡೆದ ಸದನ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂದು ಬಜೆಟ್ ಮಂಡನೆ ಬಳಿಕ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿಗೆ ನೀರು ಬಿಡುವ ಕುರಿತಂತೆ ಚರ್ಚಿಸಲಾಯಿತು.

ಕಾವೇರಿ ಜಲ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ನಡೆದ ವಿಚಾರಣೆಯಲ್ಲಿ ತಮಿಳುನಾಡಿಗೆ 2.44 ಅಡಿ ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಈ ಬಗ್ಗೆ ಚರ್ಚಿಸಲು ಇಂದು ಕರೆದಿದ್ದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ನಾಳೆ ರಾಜ್ಯದ ಪರ ವಕೀಲ ನಾರಿಮನ್ ಅವರೊಂದಿಗೆ ಚರ್ಚಿಸಿ ಮೇಲ್ಮನವಿ ಸಲ್ಲಿಸಲಾಗುತ್ತದೆ.

ಸಭೆ ನಂತರ ಮಾತನಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಕಾವೇರಿ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಅಲ್ಲದೆ ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ರಾಜ್ಯಕ್ಕೆ ಆಗಿರುವ ತೊಂದರೆ ಬಗ್ಗೆ ವಿವರಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement