ಕೆಎಂಎಫ್ ನೂತನ ಎಂಡಿಯಾಗಿ ಪ್ರೇಮನಾಥ್ ಆಯ್ಕೆ
ಕೆಎಂಎಫ್ನ ನೂತನ ಎಂಡಿಯಾಗಿ ಪ್ರೇಮನಾಥ್ ಅವರನ್ನು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿ ಸಭೆ ಆಯ್ಕೆ ಮಾಡಿದೆ.
ಬೆಂಗಳೂರು: ಕೆಎಂಎಫ್ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ(ಎಂಡಿ) ಪ್ರೇಮನಾಥ್ ಅವರನ್ನು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿ ಸಭೆ ಗುರುವಾರ ಆಯ್ಕೆ ಮಾಡಿದೆ. ಈ ಮೂಲಕ ಎಂಡಿ ಸ್ಥಾನಕ್ಕಾಗಿ ಇದ್ದ ಹಗ್ಗ ಜಗ್ಗಟಾ ತಾತ್ಕಾಲಿಕವಾಗಿ ಶಮನವಾದಂತಾಗಿದೆ.
ಇಂದು ನಡೆದ ಮಹಾ ಮಂಡಳಿ ಸಭೆಯಲ್ಲಿ ಪ್ರೇಮನಾಥ್ ಅವರನ್ನು ಎಂಡಿ ಸ್ಥಾನಕ್ಕೆ ಆಯ್ಕೆ ಮಾಡಲು ಎಲ್ಲ ಸದಸ್ಯರು ಸಹಮತ ವ್ಯಕ್ತಪಡಿಸಿರುವುದರಿಂದ ಅಂತಿಮವಾಗಿ ಅವರನ್ನು ಎಂಡಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಪ್ರೇಮನಾಥ್ ಕೆಎಂಎಫ್ನ ನೂತನ ಎಂಡಿಯಾಗಿ ಶ್ರೀನಾಥ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹರ್ಷ ಗುಪ್ತ ಅವರಿಂದ ತೆರವಾಗಿದ್ದ ಸ್ಥಾನದಲ್ಲಿ ಕಳೆದ ಎರಡು ದಿನಗಳಿಂದ ಶ್ರೀನಾಥ ಅವರು ಹಂಗಾಮಿ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದೇ ವೇಳೆ ರೈತರಿಗೆ ಸಹಾಯವಾಗುವ ದೃಷ್ಟಿಯಿಂದ ಪ್ರತಿ ಲೀಟರ್ ಹಾಲಿಗೆ ರು. 4 ಏರಿಸಲು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿ ಸಭೆ ನಿರ್ಧಾರ ಕೈಗೊಂಡಿದ್ದು, ಸರ್ಕಾರಕ್ಕೆ ದರ ಏರಿಕೆಯ ಪ್ರಸ್ತಾವನೆ ಸಲ್ಲಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.