ಕೊಡಗಿನಲ್ಲಿ 80ನೇ ಸಾಹಿತ್ಯ ಸಮ್ಮೇಳನ..?
ಮುಂದಿನ ಸಾಹಿತ್ಯ ಸಮ್ಮೇಳನವನ್ನು ಕೊಡಗಿನಲ್ಲಿ ನಡೆಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಆದರೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ಬಿಜಾಪುರ: 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕೊಡಗಿನಲ್ಲಿ ನಡೆಯುವ ಸಾಧ್ಯತೆ ಇದೆ.
ಬಿಜಾಪುರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ನೇತೃತ್ವದಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಕೊಡಗಿನಲ್ಲಿ ನಡೆಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಆದರೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ಬಿಜಾಪುರದ ಐಬಿಯಲ್ಲಿ ಇಂದು ರಾತ್ರಿ 8 ಗಂಟೆಗೆ ನಡೆಯುವ ಕಾರ್ಯಕಾರಿ ಸಮಿತಿಯಲ್ಲಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಈ ಹಿಂದೆ ಹಾವೇರಿ ಜಿಲ್ಲೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಲು ಒಲವು ವ್ಯಕ್ತವಾಗಿತ್ತು. ಆದರೆ ಹಾವೇರಿ ಜಿಲ್ಲೆಗೆ ತೀವ್ರ ಪೈಪೋಟಿ ನೀಡಿದ ಕೊಡಗಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸಮಿತಿ ನಿರ್ಧರಿಸಿದೆ.
8 ಗಂಟೆಗೆ ನಡೆಯುವ ಕಾರ್ಯಕಾರಿ ಸಮಿತಿ ಸಭೆ ಬಳಿಕ ಅಂತಿಮ ತೀರ್ಮಾನ ಹೊರಬೀಳಲಿದೆ.