ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು ವಿಶ್ವವಿದ್ಯಾಲಯವನ್ನು ವಿಭಜಿಸುವ ಕುರಿತು ಉನ್ನತ ಶಿಕ್ಷಣ ಸಚಿವ ಸಿ.ಟಿ ರವಿ ಮಂಡಿಸಿದ್ದ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

Srinivasa Murthy VN
Updated On : 11 Feb 2013, 6:19 am

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.

ಉನ್ನತ ಶಿಕ್ಷಣ ಸಚಿವ ಸಿ.ಟಿ ರವಿ ಮಂಡಿಸಿದ್ದ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಅಂಗೀಕರಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯವನ್ನು ವಿಭಜಿಸುವ ಕುರಿತು ಸಚಿವರು ಮಂಡಿಸಿದ್ದ ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಬೆಂಗಳೂರು ವಿಶ್ವ ವಿದ್ಯಾಲಯವನ್ನು ನಗರ ಮತ್ತು ಗ್ರಾಮಾಂತರ ವಿಭಾಗಗಳಲ್ಲಿ ವಿಭಜಿಸಲಾಗುತ್ತದೆ.

ಬೆಂಗಳೂರ ನಗರ ವ್ಯಾಪ್ತಿಗೆ ಅಂದರೆ ಬೆಂಗಳೂರು ಕೆಂಗೇರಿ ಬಳಿ ಇರುವ ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಬೆಂಗಳೂರು ದಕ್ಷಿಣ, ರಾಮನಗರ, ಬೆಂಗಳೂರು ಗ್ರಾಮಾಂತರದ ಕೆಲವು ಕಾಲೇಜುಗಳು ಸೇರಿದಂತೆ ಒಟ್ಟು 677 ಕಾಲೇಜುಗಳು ಒಳಪಡಲಿವೆ. ಅಂತೆಯೇ ನೂತನವಾಗಿ ಹೊಸಕೊಟೆಯಲ್ಲಿ ನಿರ್ಮಾಣವಾಗುತ್ತಿರುವ ಡಿ.ವಿ.ಜಿ ಜ್ಞಾನವಾಹಿನಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಚಿಕ್ಕಬಳ್ಳಾಪುರ, ಕೋಲಾರದ ಕಾಲೇಜುಗಳನ್ನು ಸೇರಿಸಲಾಗಿದೆ.

ನೂತನ ವಿಧೇಯಕದ ಅಂಗೀಕಾರದೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯವನ್ನು ವಿಭಜಿಸುವ ಕ್ರಿಯೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ. ಈ ಮೂಲಕ ಉನ್ನತ ವ್ಯಾಸಂಗಕ್ಕಾಗಿ ಅಲೆಯುವ ವಿದ್ಯಾರ್ಥಿಗಳ ಅಲೆದಾಟಕ್ಕೆ ಶೀಘ್ರದಲ್ಲಿಯೇ ಬ್ರೇಕ್ ಬೀಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement