ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವೈದ್ಯರ ಮುಷ್ಕರ: ಸರ್ಕಾರದ ಮಾತುಕತೆ ವಿಫಲ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರೊಂದಿಗೆ...

Lingaraj Badiger
Updated On : 11 Feb 2013, 4:16 am

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರೊಂದಿಗೆ ಸೋಮವಾರ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ನಡೆಸಿದ ಮಾತುಕತೆ ವಿಫಲವಾಗಿದೆ.

ಇಂದು ವಿಕಾಸಸೌಧದಲ್ಲಿ ನಡೆದ ಮಾತುಕತೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಿಂಬಾವಳಿ, ವೈದ್ಯರ ಎರಡು ಬೇಡಿಕೆ ಈಡೇರಿಸಲಾಗಿದೆ. ತಿಂಗಳ ಮೊದಲ ವಾರದಲ್ಲಿ ಸಂಬಳ ನೀಡುವುದು ಮತ್ತು ವರ್ಗಾಣೆ ಕಾಯ್ದೆ ತಿದ್ದುಪಡಿ ಬೇಡಿಕೆ ಈಡೇರಿಸಲಾಗಿದೆ. ಇನ್ನು 3ನೇ ಬೇಡಿಕೆಯಾದ 10 ಜಿಲ್ಲಾಸ್ಪತ್ರೆಗಳನ್ನು ಆರೋಗ್ಯ ಇಲಾಖೆ ವ್ಯಾಪ್ತಿಗೆ ತರುವ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ವೈದ್ಯರು ಮೊದಲು ಕರ್ತವ್ಯಕ್ಕೆ ಹಾಜರಾಗಿ ನಂತರ 3ನೇ ಬೇಡಿಕೆ ಕುರಿತು ಮಾತುಕತೆಗೆ ಬರಲಿ ಎಂದು ಹೇಳಿದ್ದಾರೆ. ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಷ್ಕರ ನಡೆಸಿ ಎಂದು ಲಿಂಬಾವಳಿ ಸೂಚಿಸಿದ್ದಾರೆ.

ಇನ್ನು ನಮ್ಮ ಮಾತಿಗೆ ಬೆಲೆ ಇಲ್ಲ. ಏಕಪಕ್ಷೀಯವಾಗಿ ಮಾತುಕತೆ ನಡೆಯಿತು ಎಂದು ವೈದ್ಯರ ಸಂಘದ ಅಧ್ಯಕ್ಷ ಡಾ. ರವೀಂದ್ರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ವೈದ್ಯರ ಮುಷ್ಕರದಿಂದಾಗಿ ರೋಗಿಗಳು ಪರದಾಡುವಂತಾಗಿದೆ. ನಿನ್ನೆ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದ್ದರಿಂದ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ಓರ್ವ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement