ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸದನದಲ್ಲಿ 'ಕಾವೇರಿ'ದ ಚರ್ಚೆ: ಪ್ರತಿಪಕ್ಷಗಳಿಂದ ಸಭಾತ್ಯಾಗ

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಸೋಮವಾರ ಸದನದಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ.

Lingaraj Badiger
Updated On : 11 Feb 2013, 11:41 am

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಸೋಮವಾರ ಸದನದಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಭಾತ್ಯಾಗ ಮಾಡಿದವು. ಇನ್ನು ಪ್ರತಿಪಕ್ಷಗಳೊಂದಿಗೆ ಕೈ ಜೋಡಿಸಿದ ಬಿಜೆಪಿ ಶಾಸಕ ಶಂಕರಲಿಂಗೇಗೌಡ ಅವರು ಸಹ ಸದನದಿಂದ ಹೊರ ನಡೆದರು. ಪ್ರತಿಪಕ್ಷಗಳ ಧರಣಿ ಹಾಗೂ ಸಭಾತ್ಯಾಗದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುದೂಡಲಾಯಿತು.
ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರ ಕಾವೇರಿ ನೀರು ಬಿಡುವ ಮೂಲಕ ಕಾವೇರಿ ಜಲನಯನ ಪ್ರದೇಶದ ಹಾಗೂ ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಸದನ ನಾಯಕರ ಚರ್ಚೆಯಲ್ಲಿ ಕಾವೇರಿ ನೀರು ಬಿಡದಂತೆ ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರ ಕದ್ದುಮುಚ್ಚಿ ನೀರು ಬಿಟ್ಟಿದೆ ಎಂದು ಸಿದ್ದು ಕಿಡಿ ಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement