ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: 11 ಸಾವು
ಅಸ್ಸಾಂನಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆ ವೇಳೆ ಬುಡಕಟ್ಟು ಜನಾಂಗ ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು,.
ಗುವಾಹತಿ: ಅಸ್ಸಾಂನಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆ ವೇಳೆ ಬುಡಕಟ್ಟು ಜನಾಂಗ ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ 11 ಜನ ಮೃತಪಟ್ಟಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಈವರೆಗೆ 11 ಜನ ಮೃತಪಟ್ಟಿದ್ದಾರೆ ಮತ್ತು ಆರು ಜನ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಭುಪೆನ್ ಬೊರಾ ಅವರು ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.