ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪರಿಷತ್‌ನಲ್ಲಿ ಖಾಸಗಿ ವಿವಿ ವಿಧೇಯಕ ಅಂಗೀಕಾರ

ರಾಜ್ಯದ ಮೂರು ಪ್ರಮುಖ ಕಾಲೇಜುಗಳನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸುವ ವಿಧೇಯಕವನ್ನು ಅಂಗೀಕರಿಸಲಾಯಿತು.

Srinivasa Murthy VN
Updated On : 12 Feb 2013, 4:43 am

ಬೆಂಗಳೂರು: ವಿಧಾನಪರಿಷತ್ತ್‌ನಲ್ಲಿ ಮಂಡಿಸಲಾದ 3 ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕವನ್ನು ಅಂಗೀಕರಿಸಲಾಗಿದೆ.

ವಿಧಾನ ಪರಿಷತ್ತ್ ಕಲಾಪದಲ್ಲಿ ಇಂದು ಉನ್ನತ ಶಿಕ್ಷಣ ಸಚಿವ ಸಿ.ಟಿ ರವಿ ಅವರು ಖಾಸಗಿ ವಿವಿ ವಿಧೇಯಕವನ್ನು ಮಂಡಿಸಿದರು. ರಾಜ್ಯದ ಮೂರು ಪ್ರಮುಖ ಕಾಲೇಜುಗಳನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸುವ ವಿಧೇಯಕವನ್ನು ಅಂಗೀಕರಿಸಲಾಯಿತು.

ಸಿಎಂಆರ್ ಕಾಜೇಜು, ಪ್ರೆಸಿಡೆನ್ಸಿ ಕಾಲೇಜು ಮತ್ತು ಬಾಲ್ಡ್‌ವಿನ್ ಕಾಲೇಜುಗಳನ್ನು ವಿಶ್ವವಿದ್ಯಾಲಯಗಳಾಗಿ ಪರಿವರ್ತಿಸುವ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು.

ವಿಧೇಯಕವನ್ನು ಮಂಡಿಸಿ ಮಾತನಾಡಿದ ಸಚಿವ ಸಿಟಿ ರವಿ ಅವರು, ವಿಶ್ವ ವಿದ್ಯಾಲಯಗಳ ಗುಣಮಟ್ಟ ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ. ಹೊಸದಾಗಿ ರಚನೆಯಾಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರದ ನಿಯಂತ್ರಣವಿರುತ್ತದೆ. ಸರ್ಕಾರದ ನಿಯಂತ್ರಣದಿಂದ ಹೊರಬಿದ್ದ ಅಥವಾ ನೀತಿ ನಿಯಮಗಳನ್ನು ಗಾಳಿಗೆ ತೂರುವ ಯಾವುದೇ ವಿವಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬಹುದಾಗಿದೆ. ಅಂತಹ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಸರ್ಕಾರ ರದ್ದುಗೊಳಿಸಬಹುದಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement