ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸುಪ್ರೀಂಗೆ ಮರುಪರಿಶೀಲನಾ ಅರ್ಜಿಸಲ್ಲಿಸಿದ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕರ್ನಾಟಕ ಇಂದು ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.

Srinivasa Murthy VN
Updated On : 12 Feb 2013, 5:24 am

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕರ್ನಾಟಕ ಇಂದು ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ.

ಕರ್ನಾಟಕ ಪರ ವಕೀಲ ನಾರಿಮನ್ ಅವರು ಮಂಗಳವಾರ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಕುರಿತು ಫೆಬ್ರವರಿ 4 ರಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಇಂದು ಅರ್ಜಿಯನ್ನು ಸಲ್ಲಿಸಲಾಗಿದೆ.

ಫೆಬ್ರವರಿ 4 ರಂದು ಸುಪ್ರೀಕೋರ್ಟ್, ಸಾಂಬಾ ಬೆಳೆಯನ್ನು ಉಳಿಸಿಕೊಳ್ಳಲು ತಮಿಳುನಾಡಿಗೆ 2.44 ಟಿಎಂಸಿ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಸೂಚಿಸಿತ್ತು. ಸುಪ್ರೀಂ ತೀರ್ಪಿನ ವಿರುದ್ದ ಕರ್ನಾಟಕದ ಕಾವೇರಿ ಕೊಳ್ಳದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ನ್ಯಾಯಾಲಯದ ಆದೇಶ, ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಈ ನಡುವೆ ಸುಪ್ರೀಂ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ ಫೆಬ್ರವರಿ 10 ರಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೀಗ ನ್ಯಾಯಾಲಯ ತನ್ನ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಕೋರಿ ಸರ್ಕಾರ ಮನವಿ ಸಲ್ಲಿಸಿದೆ. ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಹೀಗಾಗಿ ನಾವು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement