ನಾಳೆ ನೂತನ ಲೋಕಾಯುಕ್ತರಾಗಿ ನ್ಯಾ.ಭಾಸ್ಕರ್ ರಾವ್ ಪ್ರಮಾಣ
ರಾಜ್ಯದ ನೂತನ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ...
ಬೆಂಗಳೂರು: ಒಂದೂವರೆ ವರ್ಷದ ನಂತರ ರಾಜ್ಯ ಸರ್ಕಾರ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ನಾಳೆ ರಾಜ್ಯದ ನೂತನ ಲೋಕಾಯುಕ್ತರಾಗಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ. ಭಾಸ್ಕರ್ ರಾವ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾವ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಒಂದೂವರೆ ವರ್ಷದಿಂದ ಖಾಲಿ ಇದ್ದ ಲೋಕಾಯುಕ್ತರ ಸ್ಥಾನಕ್ಕೆ ಕಡೆಗೂ ಒಬ್ಬರನ್ನು ಸರ್ಕಾರ ನೇಮಕ ಮಾಡಿದೆ.
ನಾಳೆ ಬೆಳ್ಳಿಗ್ಗೆ 9.30ರ ಸುಮಾರಿಗೆ ರಾಜಭವನದಲ್ಲಿ ನ್ಯಾ.ಭಾಸ್ಕರ್ ರಾವ್ ಅವರು ರಾಜ್ಯದ ನೂತನ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆಂಧ್ರಪ್ರದೇಶದ ಕರೀಂನಗರದವರಾದ ನ್ಯಾ.ಭಾಸ್ಕರ್ ರಾವ್, 1999ರಿಂದ 2000ಜೂ. 26ರವರೆ ರಾಜ್ಯದ ಹೈಕೋರ್ಟ್ ಹಂಗಾಮಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಭಾಸ್ಕರ್ ರಾವ್ ಅವರು ದಿವಂಗತ ಮಾಜಿ ಪ್ರಧಾನಿ ನರಸಿಂಹರಾಜ್ ಅವರ ಸಹೋದರ ಸಂಬಂಧಿಯ ಸಂಬಂಧಿಕರಾಗಿದ್ದಾರೆ.
ನ್ಯಾ. ಶಿವರಾಜ್ ಪಾಟೀಲ್ ಅವರ ಮೇಲೆ ಅಕ್ರಮ ನಿವೇಶನ ಪಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಸ್ಥಾನಕ್ಕೆ ಅವರು ರಾಜಿನಾಮೆ ನೀಡಿದ್ದರು. ಅಂದಿನಿಂದ ಇಲ್ಲಿಯವರೆಗೆ ಬರೊಬ್ಬರಿ ಒಂದೂವರೆ ವರ್ಷದವರೆಗೆ ಸಂಸ್ಥೆ ಯಾವುದೇ ಲೋಕಾಯುಕ್ತರನ್ನು ಕಂಡಿರಲಿಲ್ಲ.
ವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿರುವುದರಿಂದ, ಜನರ ಮನಸ್ಸನ್ನು ಗೆಲ್ಲಲ್ಲು ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.