ವೀರಪ್ಪನ್ ಸಹಚರರ ಗಲ್ಲು ಶಿಕ್ಷೆ ಕ್ಷಮಾದಾನ ಅರ್ಜಿ ತಿರಸ್ಕಾರ
ವೀರಪ್ಪನ್ ಸಹಚರರ ಗಲ್ಲು ಶಿಕ್ಷೆ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು...
ನವದೆಹಲಿ: ನೆಲ ಬಾಂಬ್ ಸ್ಫೋಟಿಸಿ 21 ಜನ ಪೊಲೀಸರನ್ನು ಬಲಿತೆಗೆದುಕೊಂಡಿದ್ದ ವೀರಪ್ಪನ್ ಸಹಚರರ ಗಲ್ಲು ಶಿಕ್ಷೆಗೆ ಸಂಬಂಧಿಸಿದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಬುಧವಾರ ತಿರಸ್ಕರಿಸಿದ್ದಾರೆ.
ಈ ಪ್ರಕರಣದಲ್ಲಿ ಜ್ಞಾನ ಪ್ರಕಾಶಂ, ಸೀಮನ್, ಮೀಸೆಕಾರ್ ಮಾದಯ್ಯ, ಬಿಲವೇಂದ್ರನ್ ಎಂಬ ವೀರಪ್ಪನ್‌ನ ನಾಲ್ಕು ಸಹಚರರಿಗೆ 2004ರಲ್ಲಿ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.
1999ರಲ್ಲಿ ಕರ್ನಾಟಕದ ಪಾಲಾರ್ ಅರಣ್ಯ ಪ್ರದೇಶದಲ್ಲಿ ನೆಲ ಬಾಂಬ್ ಹುದಿಗಿಸಿಟ್ಟು, 21 ಜನ ಪೊಲೀಸರನ್ನು ಬಲಿತೆಗೆದುಕೊಂಡಿದ್ದರು. ಇವರು ಸುಪ್ರೀಂ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಪಡೆಯಲು ರಾಷ್ಟ್ರಪತಿ ಅವರಿಗೆ 2004ರಲ್ಲಿ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದರು. ಇವರ ಕ್ಷಮಾದಾನದ ಅರ್ಜಿ 2004ರಿಂದ ಇಲ್ಲಿಯವರೆಗೆ ರಾಷ್ಟ್ರಪತಿ ಕಚೇರಿಯಲ್ಲಿ ಬಿದ್ದಿತ್ತು. ಸದ್ಯ ಈ ನಾಲ್ವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ವಿಶೇಷ ಕಾರ್ಯಪಡೆ 2004ರಲ್ಲಿ ಕಾಡುಗಳ್ಳ ವೀರಪ್ಪನ್‌ನನ್ನು ಎನ್‌ಕೌಂಟರ್‌ಲ್ಲಿ ಹತ್ಯೆ ಮಾಡಿದ್ದರು. ಈ ಸಂದರ್ಭದಲ್ಲಿ ಆತನ ಈ ನಾಲ್ಕು ಸಹಚರರನ್ನು ಪೊಲೀಸರು ಬಂಧಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.