ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ಇತ್ತೀಚೆಗಷ್ಟೇ ಡೀಸೆಲ್ ದರವನ್ನು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ, ಇಂದು ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 1. 50 ರುಪಾಯಿ ಮತ್ತು ಪ್ರತೀ ಲೀಟರ್ ಡೀಸೆಲ್ ಬೆಲೆಯಲ್ಲಿ 45 ಪೈಸೆ ಏರಿಕೆ ಮಾಡಿದೆ.
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರವನ್ನು ಕೇಂದ್ರ ಸರ್ಕಾರ ಮತ್ತೆ ಏರಿಸಿದೆ.
ಇತ್ತೀಚೆಗಷ್ಟೇ ಡೀಸೆಲ್ ದರವನ್ನು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ, ಇಂದು ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 1. 50 ರುಪಾಯಿ ಮತ್ತು ಪ್ರತೀ ಲೀಟರ್ ಡೀಸೆಲ್ ಬೆಲೆಯಲ್ಲಿ 45 ಪೈಸೆ ಏರಿಕೆ ಮಾಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಇದರಿಂದ ಭಾರತೀಯ ತೈಲ ಕಂಪನಿಗಳಿಗೆ ಪ್ರತಿನಿತ್ಯ ಕೋಟ್ಯಂತರ ರುಪಾಯಿ ನಷ್ಟವಾಗುತ್ತಿದೆ. ತೈಲಕಂಪನಿಗಳ ನಷ್ಟವನ್ನು ತಪ್ಪಿಸಲು ಕೇಂದ್ರಸರ್ಕಾರ ಬೆಲೆ ಏರಿಕೆ ಮಾಡಿದೆ. ಇಂದು ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.