ಅಕ್ರಮ ಡಿನೋಟಿಫಿಕೇಷನ್: ಬಿಎಸ್‌ವೈ ವಿರುದ್ಧ ಮತ್ತೊಂದು ದೂರು
ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ವಿರುದ್ಧ ಹಲಗೆಒಡೆರಳ್ಳಿಯಲ್ಲಿ ಒಟ್ಟು 5 ಎಕರೆ ಕೃಷಿ ಭೂಮಿಯನ್ನು ಡಿನೋಟಿಫೈ ಮಾಡಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಇಂದು ದೂರು ದಾಖಲಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಮಾಡಿದ ಕುರಿತು ಮತ್ತೊಂದು ದೂರು ದಾಖಲಾಗಿದೆ.
ಬೆಂಗಳೂರು ಸಮೀಪದ ಹಲಗೆಒಡೆರಳ್ಳಿಯಲ್ಲಿ ಒಟ್ಟು 5 ಎಕರೆ ಕೃಷಿ ಭೂಮಿಯನ್ನು ಡಿನೋಟಿಫೈ ಮಾಡಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಇಂದು ದೂರು ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ಕಾಕಾ ಸಾಹೇಬ್ ಪಾಟೀಲ್, ಸಂಸದ ಬಸವರಾಜ್ ಸೇರಿದಂತೆ ಒಟ್ಟು ಐದು ಮಂದಿ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ದೂರು ದಾಖಲಾಗಿದೆ.
ಅಕ್ರಮವಾಗಿ ಡಿನೋಟಿಫೈ ಮಾಡಿದ ಕುರಿತ ಈ ದೂರಿನಲ್ಲಿ 15 ಮಂದಿ ಸಾಕ್ಷಿಗಳ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಕೇಂದ್ರ ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವಕ್ತಾರ ವೈಎಸ್‌ವಿ ದತ್ತಾ ಅವರು ಸೇರಿದಂತೆ ಒಟ್ಟು 15 ಮಂದಿಯನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ.
ಪ್ರಕರಣ ಕುರಿತಂತೆ ಇಂದು ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.